Advertisement

ಕಾಲೇಜುಗಳಿಗೆ ರಜೆ ಘೋಷಿಸಿ, ಆನ್ ಲೈನ್ ತರಗತಿ ನಡೆಸಿ: ಸಿದ್ದರಾಮಯ್ಯ ಆಗ್ರಹ

03:23 PM Feb 08, 2022 | Team Udayavani |

ಬೆಂಗಳೂರು: ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ ತಕ್ಷಣ ರಜೆ ಘೋಷಿಸಿ ಆನ್‌ ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡು ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ ಎಂದಿದ್ದಾರೆ.

ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ‌ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ರಾಜ್ಯ ಸರ್ಕಾರ ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ. ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ ಎಂದು ಹೇಳಿದ್ದಾರೆ.

ಇದನ್ನೂ ಓದಿ:ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ: ಎ.16ರಿಂದ ಪರೀಕ್ಷೆ ಆರಂಭ

ಈ ಹಿನ್ನೆಲೆಯಲ್ಲಿ‌ ಪರಿಸ್ಥಿತಿಯ ಗಂಭೀರತೆಯನ್ನು ಮುಖ್ಯಮಂತ್ರಿಗಳು ತಕ್ಷಣ ಮಧ್ಯಪ್ರವೇಶಿಸಿ ಶಾಲಾ ‌ಕಾಲೇಜುಗಳಿಗೆ ರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್ ಲೈನ್ ತರಗತಿಗಳನ್ನು ಆರಂಭಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next