ಬೆಂಗಳೂರು: ದೇಶದ ಬಹುತೇಕ ಭಾಗ ಬರ ಪರಿಸ್ಥಿತಿ ಎದುರಿಸುತ್ತಿದೆ. ಕೇಂದ್ರ ಸರ್ಕಾರ ನೀರನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಣೆ ಮಾಡುವಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿಎಸ್ ಉಗ್ರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.
ಗಂಗಾ ಕಾವೇರಿ ಜೋಡಣೆಗೆ ಕನಿಷ್ಠ 1 ಲಕ್ಷ ಕೋಟಿ ರೂ. ಮೀಸಲಿಡಬೇಕು. ರಾಜ್ಯದಲ್ಲಿ 4 ಸಾವಿರ ಟಿಎಂಸಿ ನೀರು ಲಭ್ಯವಿದೆ. ಅದರಲ್ಲಿ ಕೇವಲ ೨ ಸಾವಿರ ಟಿಎಂಸಿ ನೀರು ಬಳಕೆ ಮಾಡಲಾಗಿದೆ.
ರಾಜ್ಯದ ನೀರಾವರಿ ಯೋಜನೆಗಳಿಗೂ ಹೆಚ್ಚಿನ ಅನುದಾನ ನೀಡಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಒನ್ ನೇಷನ್ ಒನ್ ಎಲೆಕ್ಷನ್ ವ್ಯವಸ್ಥೆ ಜಾರಿಗೆ ತರಲು ಚುನಾವಣೆ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಧಿಕಾರದಲ್ಲಿ ಇರುವ ಸರ್ಕಾರವನ್ನು ಅಸ್ಥಿರಗೊಳಿಸುವುದು ಜಗಜ್ಜಾಹೀರಾಗಿದೆ. ಆಪರೇಷನ್ ಕಮಲ ಮಾಡಲು ಬಿಜೆಪಿ 1೦೦೦ ಸಾವಿರ ಕೋಟಿ ಮೀಸಲಿಟ್ಟಿದೆ ಎಂಬ ಮಾತು ಕೇಳಿ ಬರುತ್ತಿದೆ ಎಂದು ಈ ಸಂದರ್ಭದಲ್ಲಿ ಆರೋಪಿಸಿದರು.
ರಾಜ್ಯದಲ್ಲಿ ಇಷ್ಟೆಲ್ಲಾ ಬೆಳವಣಿಗೆ ಆಗುತ್ತಿದ್ದರೂ ಬಿಜೆಪಿ ಹೈ ಕಮಾಂಡ್ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಅವರ ಪಾತ್ರವೂ ಇದೆ ಎನ್ನುವ ಅನುಮಾನಕ್ಕೆ ಕಾರಣವಾಗಿದೆ ಎಂದರು.