Advertisement
ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಪರಿಪಾಲನೆ ಮಾಡುವುದರೊಂದಿಗೆ ಕೆಲವು ಚಟುವಟಿಕೆಗಳಿಗೆ ಸಡಿಲಿಕೆ ನೀಡಲಾಗಿದೆ. ಅ.17ರಂದು ತಾಂತ್ರಿಕ ಸಲಹಾ ಸಮಿತಿಯು ರಾಜ್ಯದ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಸಕ್ರಿಯ ಪ್ರಕರಣಗಳು ಸತತವಾಗಿ ಇಳಿಕೆಯಾಗುತ್ತಿರುವುದನ್ನು ಗಮನಿಸಿ ಹೆಚ್ಚಿನ ಚಟುವಟಿಕೆಗಳನ್ನು ಪುನರಾರಂಭಿಸಲು ಶಿಫಾರಸ್ಸು ಮಾಡಿದೆ ಎಂದು ಹೇಳಿದ್ದಾರೆ.
Related Articles
Advertisement
ಕೆಲವು ಷರತ್ತುಗೊಳಪಟ್ಟು ಈಜುಕೊಳ ಆರಂಭಿಸಲು ಅನುಮತಿ ನೀಡಲಾಗಿದ್ದು, ಪ್ರತಿ ತಂಡದ ಶೇ.50ರಷ್ಟು ಸಾಮರ್ಥ್ಯಕ್ಕೆ ಅನುಮತಿಸಬೇಕು. ಪ್ರವೇಶ ದ್ವಾರಗಳಲ್ಲಿ ಅನುಮತಿಸಬಹುದಾದ ಈಜುಗಾರರ ಸಂಖ್ಯೆಯನ್ನು ಪ್ರದರ್ಶಿಸಬೇಕು. ಪ್ರವೇಶ ದ್ವಾರದಲ್ಲಿ ಎಲ್ಲ ರೀತಿಯ ಜ್ವರ ಮತ್ತು ಉಸಿರಾಟದ ಲಕ್ಷಣಗಳನ್ನು ಪರೀಕ್ಷಿಸಬೇಕು. ಯಾವುದೇ ರೋಗಲಕ್ಷಣಗಳು ಇಲ್ಲದವರಿಗೆ ಮತ್ತು ಎರಡು ಡೋಸ್ ಕೋವಿಡ್ 19 ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿದವರಿಗೆ ಮಾತ್ರ ಅವಕಾಶ ನೀಡಬೇಕು. ಪ್ರತಿ ತಂಡದ ನಂತರ – ಈಜುಗಾರರು ಬಳಸುವ ವಿಶ್ರಾಂತಿ ಕೊಠಡಿಗಳು, ಕಾಲುದಾರಿಗಳು ಮತ್ತು ಇತರೆ ಸಾಮಾನ್ಯ ಸ್ಥಳಗಳನ್ನು ಸೋಡಿಯಂ ಹೈಪೋಕ್ಲೋರೈಟ್ ಮಿಶ್ರಿತ ದಾವಣನಿಂದ ಸೋಂಕು ರಹಿತಗೊಸಬೇಕು ಎಂದು ಅವರು ತಿಳಿಸಿದ್ದಾರೆ.
ಕಿರಿಯ ಪ್ರಾಥಮಿಕ ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಂತಹ ಶಿಕ್ಷಕರು ಮತ್ತು ಸಿಬ್ಬಂದಿಗೆ ಮಾತ್ರ 1ರಿಂದ 5ನೇ ತರಗತಿ ಕೊಠಡಿಗಳಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು. 50 ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷಕರು ಕಡ್ಡಾಯವಾಗಿ ಫೇಸ್ ಶೀಲ್ಡ್ ಬಳಸಬೇಕು. -ವಿ.ವಿ.ಜ್ಯೋತ್ಸ್ನಾ, ಜಿಲ್ಲಾಧಿಕಾರಿ