Advertisement
ಜಿಲ್ಲಾಡಳಿತ, ಜಿ.ಪಂ. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಾನಸ ಗಂಗೋತ್ರಿಯ ವಿಲೇಜ್ ಹಾಸ್ಟೆಲ್ ಬಳಿ ಬಿಎಸಿಎಂ ಹಾಸ್ಟೆಲ್‌ನ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರೊಂದಿಗೆ ಉದ್ಘಾಟಿಸಿ ಸಚಿವ ಕೋಟ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಲು ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ಬರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಊಟ, ವಸತಿ ಸಹಿತ ವಿದ್ಯಾರ್ಥಿ ನಿಲಯಗಳ ಸೌಲಭ್ಯವನ್ನು ನೀಡಲಾಗುವುದು. ಪ್ರಸ್ತುತ ರಾಜ್ಯದಲ್ಲಿ 1 ಲಕ್ಷಕ್ಕೂ ಅಧಿಕ ಮಕ್ಕಳು ಹಾಸ್ಟೆಲ್‌ಗಾಗಿ ಬೇಡಿಕೆ ಇಟ್ಟಿದ್ದಾರೆ. ಪ್ರತೀ ನಗರ ಪ್ರದೇಶದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದೀನ್‌ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದವರು ತಿಳಿಸಿದರು.