Advertisement

ಕುಸ್ತಿಪಟು ದೀಪಕ್ ಪುನಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್: ಹೋಮ್ ಐಸೋಲೇಷನ್ ಗೆ ಸಲಹೆ

05:04 PM Sep 06, 2020 | sudhir |

ನವದೆಹಲಿ ; ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನ ಬೆಳ್ಳಿ ಪದಕ ವಿಜೇತ ದೀಪಕ್ ಪೂನಿಯಾ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದ್ದು ಸದ್ಯ ಅವರನ್ನು ಹೋಮ್ ಐಸೋಲೇಷನ್ ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Advertisement

ಸೆಪ್ಟೆಂಬರ್ 3ರಂದು ದೀಪಕ್ ಪೂನಿಯಾ ಹಾಗೂ ಇತರ ಇಬ್ಬರು ಕುಸ್ತಿ ಪಟುಗಳಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ವೈದ್ಯರ ಸಲಹೆಯ ಮೇರೆಗೆ ಹೋಮ್ ಐಸೋಲೇಷನ್ ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದು ಹಾಗಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಸೋನೆಪತ್ ನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ ರಾಷ್ಟ್ರೀಯ ಶಿಬಿರದಲ್ಲಿದ್ದ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಈ ಸಂದರ್ಭ ಅವರ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next