Advertisement

ದೀಪಾವಳಿ ಹಬ್ಬದ ಆಚರಣೆಗೆ ಮಾರ್ಗ ಸೂಚಿ ಪ್ರಕಟ: ಏನಿದೆ ಮಾರ್ಗಸೂಚಿಯಲ್ಲಿ?

10:16 PM Oct 14, 2020 | mahesh |

ಬೆಂಗಳೂರು : ಕೋವಿಡ್‌-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದೀಪಾವಳಿ ಹಬ್ಬದ ಆಚರಣೆ ಹಾಗೂ ಪಟಾಕಿ ಮಾಟರಕ್ಕೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಸೂಚಿ ವಿಧಾನ(ಎಸ್‌ಒಪಿ) ಬಿಡುಗಡೆ ಮಾಡಿದೆ.

Advertisement

ಅಂದಹಾಗೆ ಮಾರ್ಗಸೂಚಿಯಲ್ಲಿ ಏನೇನಿದೆ ನೋಡೋಣ:
1. ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು.
2. ಪಟಾಕಿ ಮಾರಾಟದ ಮಳಿಗೆಯನ್ನು ದಿನಾಂಕ : 01. 11. 2020 ರಿಂದ 17. 11.2020 ರವರೆಗೆ ಮಾತ್ರ ತೆರೆದಿರತಕ್ಕದ್ದು .
3. ಪರವಾನಿಗೆದಾರರು ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು.
4. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಧಿಕಾರ ಅನುಮತಿಸತಕ್ಕದ್ದು.
5. ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿವಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು.
6. ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಧಿಕಾರಗಳಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಪರವಾನಗಿ ಪ್ರತಿಯನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.
7. ಪಟಾಕಿ / ಸಿಡಿ ಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತ ಮುತ್ತ ದಿನ ನಿತ್ಯ ಸ್ಯಾನಿಟೈಸರ್ ಹಾಗೂ ಥುರ್ಮಲ್ ಸ್ಕ್ರಿನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸತಕ್ಕದ್ದು.
8. ಪಟಾಕಿ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು.
9. ಕೋವಿಡ್ -19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರ ಹೊರಡಿಸಿದ ಮಾರ್ಗ ಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕದ್ದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿ ಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ/ ಕಾರ್ಪೋರೇಷನ್/ ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗ ಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕದ್ದು.
10. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಆದೇಶ / ಮಾರ್ಗ ಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

 

Advertisement

Udayavani is now on Telegram. Click here to join our channel and stay updated with the latest news.

Next