ಶ್ರೀ ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ, ಅಮಾವಾಸ್ಯೆಯ ಹಿಂದಿನ ದಿನ (ನರಕ ಚತುರ್ದಶಿ) ಶ್ರೀಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ವಿರುದ್ಧ ಶುಭದ ವಿಜಯವನ್ನು ಆಚರಿಸಲಾಗುತ್ತದೆ.
ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ ಬಲಿ ಪಾಡ್ಯಮಿ ದೀಪಾವಳಿಯೊಂದಿಗೆ ಇನ್ನಿತರ ಪುರಾಣಗಳೂ ಸಂಬಂಧಿತವಾಗಿದೆ. ಉದಾಹರಣೆಗೆ, ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ ಬಲಿ ಪಾಡ್ಯಮಿಯಾಗಿ ಆಚರಿಸಲಾಗುತ್ತದೆ.
ಹಿಂದೂ ಧರ್ಮದ ಜನರು ಪ್ರತಿ ವರ್ಷವೂ ಪ್ರಪಂಚದ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿ ತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ ಪಟಾಕಿಗಳಿಗೆ ದೀಪಾವಳಿ ಪ್ರಸಿದ್ಧ. ಉತ್ತರ ಭಾರತದಲ್ಲಿ ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ.
ದೀಪಾವಳಿಯ ಅಂಗವಾಗಿ ನಡೆಯುವ ಇತರ ಆಚರಣೆಗಳಲ್ಲಿ ವಾಹನ ಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು.
ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು.
ಕಾರ್ತಿಕ್.ಪಿ.ಎಲ್
ಪಶುಪತಿ ಗ್ರಾಮ ಸಾಲಿಗ್ರಾಮ ಹೋಬಳಿ
ಕೆ.ಆರ್.ನಗರ ತಾಲ್ಲೂಕು, ಮೈಸೂರು ಜಿಲ್ಲೆ