Advertisement

ಕೋವಿಡ್ ನಿರ್ದೇಶನಗಳನ್ನು ಪಾಲಿಸಿ ದೀಪಾವಳಿ ಹಬ್ಬ ಆಚರಣೆ: ಸಚಿವ ಸುಧಾಕರ್ ಹರ್ಷ

08:23 AM Nov 15, 2020 | keerthan |

ಚಿಕ್ಕಬಳ್ಳಾಪುರ: ಕೋವಿಡ್-19 ಹಿನ್ನಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸುವ ನಿಟ್ಟಿನಲ್ಲಿ ಜನತೆಯು ಸರ್ಕಾರದ ನಿರ್ದೇಶನಗಳನ್ನು ಪಾಲಿಸುವಲ್ಲಿ ಯಶಸ್ವಿಯಾಗಿದ್ದು, ನನ್ನ ಹುಟ್ಟೂರಾದ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿಯೂ ರಾಸಾಯನಿಕ ಪಟಾಕಿಗಳನ್ನು ನಿಷೇಧಿಸಿ ಹಸಿರು ಪಟಾಕಿಗಳನ್ನು ಬಳಸುತ್ತಿರುವುದು ಸ್ವಾಗತಾರ್ಹ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು, ಈ ಬಾರಿ ಪಟಾಕಿ ಅಂಗಡಿಗಳನ್ನು ನಿಷೇಧಿಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಈ ಮೂಲಕ ನಾಂದಿ ಹಾಡಲಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪರಿಸರಕ್ಕೆ ಮಾರಕವಾದ ಎಲ್ಲಾ ಪಟಾಕಿಗಳನ್ನು ನಿಷೇಧಿಸಿ ದಿಟ್ಟ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿರುವುದು ಸಕಾರಾತ್ಮಕ ಬೆಳವಣಿಗೆ ಎಂದರು.

ನಾಡಿನ ಸಮಸ್ತ ಜನತೆಯು ತಮ್ಮ ಮನೆಗಳಲ್ಲಿ ಹಣತೆಯನ್ನು ಹಚ್ಚುವ ಮೂಲಕ ಸಾಂಪ್ರದಾಯಿಕವಾಗಿ ಬೆಳಕಿನ ಹಬ್ಬವನ್ನು ಆಚರಿಸಬೇಕೆಂದು ಮನವಿ ಮಾಡಿರುವ ಉಸ್ತುವಾರಿ ಸಚಿವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ದೈಹಿಕ ಅಂತರ ಕಾಪಾಡಿ ದೀಪಗಳ ಹಬ್ಬ ದೀಪಾವಳಿಯನ್ನು ಆಚರಿಸಬೇಕೆಂದು ಮನವಿ ಮಾಡಿ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next