ನವದೆಹಲಿ: ಕೇನ್ಸ್ ಚಲನಚಿತ್ರೋತ್ಸವದಲ್ಲಿ ಕಳೆದ ವರ್ಷ ಜ್ಯೂರಿಯಾಗಿ ಭಾಗವಹಿಸಿದ್ದ ಭಾರತೀಯ ನಟಿ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಈಗ ಮತ್ತೊಮ್ಮೆ ವಿಶ್ವ ಭೂಪಟದಲ್ಲಿ ಭಾರತವನ್ನು ಮಿನುಗಿಸಲಿದ್ದು, 2023ರ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ಪ್ರಸ್ತುತ ಪಡಿಸಲಿರುವ ಭಾರತೀಯಳೆಂಬ ಗರಿಮೆಗೆ ಪಾತ್ರರಾಗಲಿದ್ದಾರೆ.
Advertisement
95ನೇ ಅಕಾಡೆಮಿ ಪ್ರಶಸ್ತಿ ಸಮಾರಂಭ ಇದೇ 12ರಂದು ಲಾಸ್ ಏಂಜಲೀಸ್‌ನಲ್ಲಿ ನಡೆಯಲಿದ್ದು, ಇದರಲ್ಲಿ ಆಸ್ಕರ್ ಪ್ರಶಸ್ತಿ ಪ್ರಸ್ತುತ ಪಡಿಸುತ್ತಿರವವರಲ್ಲಿ ದೀಪಿಕಾ ಕೂಡ ಒಬ್ಬರಾಗಿದ್ದಾರೆ.ಈ ವಿಚಾರವನ್ನು ಜಾಲತಾಣದಲ್ಲಿ ದೀಪಿಕಾ ಹಂಚಿಕೊಂಡಿದ್ದು, ಅಭಿಮಾನಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.