Advertisement

Pregnancy: ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ – ರಣವೀರ್ ಸಿಂಗ್

10:43 AM Feb 29, 2024 | Team Udayavani |

ಮುಂಬಯಿ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಘೋಷಿಸಿದ್ದಾರೆ.

Advertisement

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ನಟಿ ದೀಪಿಕಾ ಪಡುಕೋಣೆ ಅವರು ತಮ್ಮ ಗರ್ಭಧಾರಣೆಯನ್ನು ಘೋಷಿಸಿಕೊಂಡಿದ್ದಾರೆ. ನವೆಂಬರ್ ತಿಂಗಳಲ್ಲಿ ಮಗುವಿಗೆ ಜನ್ಮ ನೀಡುವ ವಿಚಾರವನ್ನು ಹೇಳಿಕೊಂಡಿದ್ದಾರೆ.

ಇತ್ತೀಚೆಗೆ BAFTA ಪ್ರಶಸ್ತಿ ಕಾರ್ಯಕ್ರಮದಲ್ಲಿ ನಿರೂಪಕಿಯಾಗಿದ್ದ ದೀಪಿಕಾ ಸೀರೆ ಉಟ್ಟುಕೊಂಡಿದ್ದರು ಇದಕ್ಕೆ ಕೆಲವು ಅಭಿಮಾನಿಗಳು ದೀಪಿಕಾ ಗರ್ಭಿಣಿ ಎಂದು ಸುದ್ದಿ ಹಬ್ಬಿಸಿದ್ದರು. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯಿಂದ ಗುಸು ಗುಸು ಸುದ್ದಿಗೆ ತೆರೆ ಬಿದ್ದಂತಾಗಿದೆ. ಅಲ್ಲದೆ ದೀಪಿಕಾ ಪ್ರೆಗ್ನೆನ್ಸಿ ಸುದ್ದಿ ಕೇಳಿ ಅಭಿಮಾನಿಗಳು ಸಂಭ್ರಮಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next