Advertisement

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

01:42 PM Sep 26, 2020 | Nagendra Trasi |

ಮುಂಬೈ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಜಾಲದ ನಂಟಿನ ಕುರಿತ ವಿಚಾರಣೆಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಶನಿವಾರ (ಸೆಪ್ಟೆಂಬರ್ 26, 2020) ಹಾಜರಾಗಿದ್ದು, ತನಿಖೆ ನಡೆಯುತ್ತಿದೆ.

Advertisement

ಶುಕ್ರವಾರ ದೀಪಿಕಾ ಪಡುಕೋಣೆ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ಹಾಗೂ ನಟಿ ರಾಕುಲ್ ಪ್ರೀತ್ ಸಿಂಗ್ ಎನ್ ಸಿಬಿಗೆ ವಿಚಾರಣೆಗೆ ಹಾಜರಾಗಿದ್ದರು. ನಟಿ ಸಾರಾ ಅಲಿಖಾನ್ ಗೆ ಶನಿವಾರ ಬೆಳಗ್ಗೆ 10.30ಕ್ಕೆ ಕಚೇರಿಗೆ ಹಾಜರಾಗುವಂತೆ ಎನ್ ಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ವಿಚಾರಣೆಗೆ ಆಗಮಿಸುವುದು ವಿಳಂಬವಾಗಲಿದೆ ಎಂದು ಮನವಿ ಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ 12.30ಕ್ಕೆ ವಿಚಾರಣೆಗೆ ಹಾಜರಾಗಿದ್ದು, ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ. ನಟಿ ಶ್ರದ್ಧಾ ಕಪೂರ್ ಕೂಡಾ ಎನ್ ಸಿಬಿ ಕಚೇರಿಗೆ ಹಾಜರಾಗಿರುವುದಾಗಿ ವರದಿ ಹೇಳಿದೆ.

ಶುಕ್ರವಾರ ನಡೆದ ವಿಚಾರಣೆ ವೇಳೆ ಡ್ರಗ್ಸ್ ಕುರಿತ ವಾಟ್ಸಪ್ ಚಾಟ್ ಬಗ್ಗೆ ದೀಪಿಕಾ ಮ್ಯಾನೇಜರ್ ಕರೀಷ್ಮಾ ತಪ್ಪೊಪ್ಪಿಕೊಂಡಿರುವುದಾಗಿ ವರದಿ ವಿವರಿಸಿದೆ.

ಮಾದಕದ್ರವ್ಯಕ್ಕೆ ಸಂಬಂಧಿಸಿದ ವಾಟ್ಸ್‌ಆ್ಯಪ್‌ ಚಾಟ್‌ ಗ್ರೂಪ್‌ಗೆ ನಟಿ ದೀಪಿಕಾ ಪಡುಕೋಣೆ ಅಡ್ಮಿನ್‌ ಆಗಿದ್ದರು ಎಂಬ ಮಾಹಿತಿ ಬಹಿರಂಗವಾಗಿದ್ದು, ಬಾಲಿವುಡ್‌ ಮಾದಕದ್ರವ್ಯ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌ ದೊರೆತಿತ್ತು.

ಇದನ್ನೂ ಓದಿ: ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

Advertisement

ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್‌ಸಿಬಿ) ನಡೆಸಿದ ವಿಚಾರಣೆ ವೇಳೆ ದೀಪಿಕಾ ಅವರ ಮ್ಯಾನೇಜರ್‌ ಕರಿಷ್ಮಾ ಪ್ರಕಾಶ್‌ ಈ ಮಾಹಿತಿ ಹೊರಹಾಕಿದ್ದಾರೆ. ಈ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ತಾವು ಮತ್ತು ಜಯ ಸಹಾ ಅವರೂ ಇದ್ದರು ಎಂದೂ ಎನ್‌ಸಿಬಿ ಅಧಿಕಾರಿಗಳಿಗೆ ಹೇಳಿದ್ದರು. ಇದೇ ವೇಳೆ ಶನಿವಾರ ದೀಪಿಕಾ ಪಡುಕೋಣೆ ಅವರು ಎನ್‌ಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next