Advertisement

ಯತ್ನಾಳ್‌ ವಿರುದ್ಧ ಡಿಕೆಶಿ 204 ಕೋಟಿ ರೂ. ಮಾನನಷ್ಟ ಮೊಕದ್ದಮೆ

05:29 PM Aug 05, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ನ ಟ್ರಬಲ್‌ ಶೂಟರ್‌ ಎಂದೇ ಹೆಸರಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಇದೀಗ ಬಿಜೆಪಿ ನೇತಾರ, ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಅಸ್ತ್ರ ಝಳಪಿಸಿದ್ದಾರೆ.

Advertisement

204 ಕೋಟಿ ರೂ. ಮೊತ್ತದ ದಾವೆಯನ್ನು ಡಿಕೆಶಿ ಬೆಂಗಳೂರು ಗ್ರಾ. ಜಿಲ್ಲೆಯ ಕನಕಪುರ ಸೀನಿಯರ್‌ ಸಿವಿಲ್‌ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯಗಳಲ್ಲಿ ಹಾಕಿದ್ದಾರೆ. ಇದನ್ನು ನ್ಯಾಯಾಧೀಶರು ವಿಚಾರಣೆಗೆ ಅಂಗೀಕರಿಸಿದ್ದಾರೆ.

ಕಳೆದ ಜೂ.23ರಂದು ಯತ್ನಾಳ್‌ ಅವರು ತಮ್ಮ ವಿರುದ್ಧ ಮಾನಹಾನಿಕರವಾಗಿ ಮಾತನಾಡಿದ್ದಾರೆ. ತಮ್ಮ ವಿರುದ್ಧದ ಆದಾಯ ತೆರಿಗೆ ಪ್ರಕರಣಗಳಿಂದ ಮುಕ್ತಿಗೊಳಿಸಿದರೆ, ಬಿಜೆಪಿ ಸರಕಾರ ರಚನೆಗೆ ವಿರೋಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾಗಿ ಡಿ.ಕೆ.ಶಿವಕುಮಾರ್‌ ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಪ್ರಕರಣದ ವಿಚಾರಣೆ ಸೆ.18ಕ್ಕೆ ಮುಂದೂಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next