ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಾನೂನು ಸಮರ ಮುಂದುವರಿಸಿದ್ದಾರೆ.
ತಮ್ಮ ಪರ ವಕೀಲ ಅನಿಲ್ ಹಾಗೂ ಪತಿ ಸುಧೀರ್ ರೆಡ್ಡಿ ಜತೆ ನಗರದ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾದ ರೋಹಿಣಿ ಸಿಂಧೂರಿ, ಐಪಿಎಸ್ ರೂಪಾ ವಿರುದ್ಧ 1 ಕೋ.ರೂ. ಮಾನನಷ್ಟ ಕೇಸು ದಾಖಲಿಸಿದ್ದಾರೆ.
ನ್ಯಾಯಾಧೀಶರ ಮುಂದೆ ಹೇಳಿಕೆ ಯೂ ನೀಡಿದ್ದಾರೆ. ತಡೆಯಾಜ್ಞೆ ಇದ್ದರೂ, ತಮ್ಮ ವಿರುದ್ಧ ಪೋಸ್ಟ್ ಹಾಕುತ್ತಿದ್ದಾರೆ.
ಚಾಮರಾಜನಗರ ಆಕ್ಸಿಜನ್ ಸಿಲಿಂಡರ್ ದುರಂತ ಸಂಬಂಧ ಸರಕಾರಕ್ಕೆ ವರದಿ ನೀಡಿದ್ದರೂ, ಉದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡಿ ಅವಮಾನ ಮಾಡುತ್ತಿದ್ದಾರೆ. ನಿಯಮ ಉಲ್ಲಂ ಸಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾರೆ ಎಂದು ನ್ಯಾಯಾಧೀಶರ ಎದುರು ಉಲ್ಲೇಖಿಸಿದ್ದಾರೆ. ಈ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮಾ. 3ಕ್ಕೆ ವಿಚಾರಣೆ ಮುಂದೂಡಿದೆ.