Advertisement
500 ಎಕರೆ ಜಮೀನು ಹೊಂದಿದ್ದಾರೆ ಎಂದು ನನ್ನ ಮೇಲೆ ಆರೋಪ ಮಾಡಿರುವ ಎಂ.ಲಕ್ಷ್ಮಣ್, ನಿಮಗೆ ಕಾನೂನೇ ಉತ್ತರ ಕೊಡುತ್ತದೆ. ಕಾನೂನಿನ ಆ ಕಬಂಧ ಬಾಹುಗಳಿಂದ ನೀವು ಮತ್ತು ನಿಮ್ಮ ಜೀ ಹುಜೂರ್ (ಗ್ರಾಮ ಪಂಚಾಯಿತಿ ಗೆಲ್ಲದ) ನಾಯಕರು ತಪ್ಪಿಸಿಕೊಳ್ಳಲಾರಿರಿ. ನನ್ನ ಸಾರ್ವಜನಿಕ ಜೀವನದಲ್ಲಿ ಇಂತಹ ಆರೋಪ ಮೊದಲೇನಲ್ಲ. ಹಿಂದೆ ಕೆಲ ಬಾರಿ ನಿಮ್ಮಂತ ಪ್ರಚಾರ ಪ್ರಿಯರು ಮಾಧ್ಯಮಗಳ ಮುಂದೆ ಬಂದು ಠುಸ್ ಪಟಾಕಿ ಹಾರಿಸಿ ಹೋಗಿದ್ದೀರಿ. ʼಬರಿಗೈʼ ತೋರಿಸಿ ಮಾಧ್ಯಮಗಳ ಮುಂದೆ ಪ್ರಚಾರ ಗಿಟ್ಟಿಸಿಕೊಳ್ಳಲು ತಾವು ಮಾಡಿರುವ ಆರೋಪಕ್ಕೆ ಕಾನೂನು ಮೂಲಕವೇ ಉತ್ತರ ಕೊಡಲು ಸಿದ್ದನಾಗಿದ್ದೇನೆ. ತಾವು ಮಾಡಿದ ಸುಳ್ಳು ಆರೋಪಕ್ಕೆ ಸಾರ್ವಜನಿಕ ಕ್ಷಮೆ ಯಾಚಿಸದಿದ್ದರೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ತಿಳಿಸಿದ್ದಾರೆ.
Related Articles
Advertisement
ನನ್ನ ಸಾರ್ವಜನಿಕ ಜೀವನದಲ್ಲಿ 4 ಬಾರಿ ಚುನಾವಣೆಗೆ ನಿಂತು ಗೆದ್ದು ಶಾಸಕನಾಗಿದ್ದೇನೆ, ಮಂತ್ರಿಯಾಗಿದ್ದೇನೆ. ಚುನಾವಣೆಗೆ ನಿಂತಾಗ ಚುನಾವಣಾಧಿಕಾರಿಗಳಿಗೆ ನನ್ನ ಆಸ್ತಿಯ ಕುರಿತು ಅಫಿಡವಿಟ್ ಸಲ್ಲಿಸಿದ್ದೇನೆ. 2004 ರಲ್ಲಿ ಸಲ್ಲಿಸಿದ ಅಫಡವಿಟ್, 2021ರಲ್ಲಿ ಸಲ್ಲಿಸಿದ ಅಫಿಡವಿಟ್ ಗೂ ವ್ಯತ್ಯಾಸವನ್ನು ನೋಡಿ.ನಿಮ್ಮ ಪಕ್ಷದ ಮುಖಂಡರ ಆಸ್ತಿ ವ್ಯತ್ಯಾಸವನ್ನು ಗಮನಿಸಿ ಆಗ ಕಳ್ಳರು ಯಾರು ಅನ್ನುವುದು ನಿಮಗೆ ಅರ್ಥವಾಗುತ್ತದೆ. ನಾನು ಯಾವುದೇ ಅಸ್ವಾಭಾವಿಕವಾಗಿ ಆಸ್ತಿಯನ್ನು ಸಂಪಾದಿಸಿಲ್ಲ. ನನ್ನ ಮೇಲೆ ಒಂದಿಬ್ಬರು ಲೋಕಾಯುಕ್ತಕ್ಕೂ ದೂರು ಸಲ್ಲಿಸಿದ್ದಾರೆ. ದೂರನ್ನು ಸಲ್ಲಿಸಿ ಮುಖಭಂಗಕ್ಕೆ ಒಳಗಾಗಿದ್ದಾರೆ. ನೀವೊಬ್ಬರು ಬಾಕಿ ಇದ್ದೀರಿ. ಈ ಹಿಂದೆ ಪ್ರತಿ ಬಾರಿ ಆಪಾದನೆಗಳು ಬಂದಾಗಲು ನಾನು ದೃತಿಗೆಟ್ಟಿಲ್ಲ. ಕಾನೂನು ಪ್ರಕಾರವೇ ಉತ್ತರ ಕೊಟ್ಟಿದ್ದೇನೆ. ನಾನು ಪಾರದರ್ಶಕವಾಗಿದ್ದೇನೆ. ಕೂಲಂಕಷವಾಗಿ ಪರಿಶೀಲನೆಗೂ ಸಿದ್ದರಿದ್ದೇನೆ. ನಿಮ್ಮ ಬಳಿ ನನ್ನ 500 ಎಕರೆ ಜಮೀನಿನ ದಾಖಲೆಗಳಿದ್ದರೆ ಅದನ್ನು ನನಗೆ ಕೊಟ್ಟು ನೀವು ಅರ್ಧ ಜಮೀನನ್ನು ನನ್ನಿಂದಲೇ ಬಳುವಳಿಯಾಗಿ ಪಡೆಯಿರಿ. ʼಸತ್ಯ ಹೊಸ್ತಿಲು ದಾಟುವಷ್ಟರಲ್ಲೇ ನಿಮ್ಮಂತ ಸುಳ್ಳುಗಾರರಿಂದ ಸುಳ್ಳು ಊರೆಲ್ಲ ಸುತ್ತಿ ಬಂತಂತೆʼ. ಆರೋಪಕ್ಕೆ ಕಾನೂನು ಮೂಲಕ ಉತ್ತರ ಕೊಡುವೆ. ಅದಕ್ಕೆ ನೀವು ಸಿದ್ದರಾಗಿರಿ ಎಂದು ತಿಳಿಸಿದ್ದಾರೆ.