Advertisement
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ.8ರಂದು ಪ್ರಧಾನಿ ನರೇಂದ್ರಮೋದಿ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರದಿಂದ ದೇಶದ ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ. ಕೂಲಿ ಕಾರ್ಮಿಕರು, ರೈತರು, ಕೃಷಿ ಕಾರ್ಮಿಕರು ಬದುಕಿಗಾಗಿ ಪರಿತಪಿಸಬೇಕಾಗಿ ಬಂದಿದೆ. ಅಸಂಘಟಿತ ವಲಯದಲ್ಲಿ ಶೇಕಡ 8ಕ್ಕೂ ಹೆಚ್ಚು, ನಿರ್ಮಾಣ ಹಾಗೂ ಕೃಷಿ ಕಾರ್ಮಿಕ ವಲಯದಲ್ಲಿ ನೋಟು ರದ್ಧತಿಯಿಂದ 2 ಕೋಟಿ ಜನ ಉದ್ಯೋಗ ಕಳೆದು ಕೊಂಡಿದ್ದಾರೆ.
Related Articles
Advertisement
ಇದರ ವಿರುದ್ಧ ಕಾಂಗ್ರೆಸ್ ಪಕ್ಷ ಹಂತ ಹಂತವಾಗಿ ಹೋರಾಟ ಕೈಗೆತ್ತಿಕೊಂಡಿದ್ದು, ಮೊದಲ ಹಂತವಾಗಿ ಜ.9ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, 2ನೇ ಹಂತದಲ್ಲಿ ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನೇತೃತ್ವದಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಮಂತ್ರಿಗಳೂ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರ ದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಹೇರಿದೆ. 1978ರಲ್ಲಿ ನೋಟು ರದ್ದು ಮಾಡಿದಾಗ ದೇಶದಲ್ಲಿ ಈ ರೀತಿಯ ಅರಾಜಕತೆ ಉಂಟಾಗಿರಲಿಲ್ಲ. ಆದರೆ, ಪ್ರಧಾನಿ ನರೇಂದ್ರಮೋದಿ ಯಾವುದೇ ಪೂರ್ವ ತಯಾರಿ ಇಲ್ಲದೆ, ನೋಟು ರದ್ದು ಮಾಡಿದ್ದರಿಂದ ಜನತೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ವಿತ್ತ ಮಂತ್ರಿ, ಆರ್‌ಬಿಐ ಯನ್ನು ಕತ್ತಲಲ್ಲಿಟ್ಟು ದಿನಕ್ಕೊಂದು ಆದೇಶ ಮಾರ್ಪಾಡು ಮಾಡುತ್ತಿರುವುದರಿಂದ ದೇಶದ ಬೆಳವಣಿಗೆ ದರ (ಜಿಡಿಪಿ) ಕುಸಿಯುತ್ತಿದೆ ಎಂದು ದೂರಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್.ರವಿಶಂಕರ್ ಹಲವು ಮುಖಂಡರು ಸುದ್ದಿಗೋಷ್ಠಿಯಲ್ಲಿದ್ದರು.
10 ಸಾವಿರ ಮಂದಿ ಭಾಗಿನೋಟು ರದ್ಧತಿ ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಪಕ್ಷದ ಮುಂಚೂಣಿ ಘಟಕಗಳ ಮುಖಂಡರು ಸೇರಿದಂತೆ ಸುಮಾರು 10 ಸಾವಿರ ಮಂದಿ ಭಾಗವಹಿಸಲಿದ್ದು, ಬೆಳಗ್ಗೆ 11ಕ್ಕೆ ರೈಲು ನಿಲ್ದಾಣ ಬಳಿಯ ಕಾಂಗ್ರೆಸ್ ಪಕ್ಷದ ನಿವೇಶನದಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಲಾಗುತ್ತದೆ. ಮಹಿಳಾ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಅದರಲ್ಲೂ ಬೆಂಗಳೂರನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ರಾಜಸ್ಥಾನದಲ್ಲಿ ಕ್ರಿಸ್‌ಮಸ್ ದಿನವೇ ಮಹಿಳೆಯೊಬ್ಬರನ್ನು ಬೆತ್ತಲುಗೊಳಿಸಿದ ಪ್ರಕರಣದ ಬಗ್ಗೆ ಯಾವ ಮಾಧ್ಯಮಗಳೂ ಬಿಂಬಿಸುತ್ತಿಲ್ಲ.
-ಡಾ. ನಾಗಲಕ್ಷ್ಮೀ, ಉಪಾಧ್ಯಕ್ಷೆ, ರಾಜ್ಯ ಮಹಿಳಾ ಕಾಂಗ್ರೆಸ್