ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ಹಾಗೂ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲಲು ಸಾಧ್ಯವಿಲ್ಲ. ಅದರಲ್ಲೂ ಬಾದಾಮಿಗೆ ಬಂದರೆ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಇಲ್ಲಿನ ಜನ ಸೋಲಿಸಲಿದ್ದಾರೆ ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.
Advertisement
ಕೆರಕಲಮಟ್ಟಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದ ಬಳಿಕ ವರುಣಾ ಕ್ಷೇತ್ರದಿಂದ ಸ್ಪರ್ಧೆಗೆ ನಿರ್ಧರಿಸಿದ್ದಾರೆ. ಜತೆಗೆ ಇನ್ನೊಂದು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದು, ಏನಿದ್ದರೂ ಅವರಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿ ಎಂದರು.