ಬೀಳಗಿ: ನಮ್ಮವರ ಒಳ ಸಂಚಿನಿಂದ ನಾವು ವಿಧಾನಸಭಾ ಚುನಾವಣೆಯಲ್ಲಿ ಸೋಲಬೇಕಾಯಿತೇ ಹೊರತು ಕಾಂಗ್ರೆಸ್‌ನಿಂದಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಣ್ಣಪುಟ್ಟ ಮನಸ್ತಾಪಗಳಿದ್ದರೆ ಅವುಗಳನ್ನು ಬದಿಗೊತ್ತಿ ದೇಶದ ಅಭಿವೃದ್ಧಿಗೋಸ್ಕರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.
Advertisement
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಬಾಗಲಕೋಟೆ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಆದ್ದರಿಂದ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಗೆಲುವಿಗೆ ಶ್ರಮಿಸಬೇಕು ಎಂದರು. ಸ್ವಾತಂತ್ರ್ಯ ನಂತರ ಕೇಂದ್ರದಲ್ಲಿ ಬಿಜೆಪಿ ಅಧಿ ಕಾರಕ್ಕೆ ಬಂದ ನಂತರ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ದೇಶ ವಿರೋಧಿ ಶಕ್ತಿಗಳನ್ನು ನಿಗ್ರಹಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗಿದೆ ಎಂದರು.
Related Articles
Advertisement
ಲೋಕಸಭಾ ಚುನಾವಣೆಯಲ್ಲಿ 405ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿಗೆ ಬರಲಿವೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ನೂರಕ್ಕೆ ನೂರರಷ್ಟು ಸತ್ಯ. ಬಾಗಲಕೋಟೆ ಮತಕ್ಷೇತ್ರದ ಜನರ ಮೇಲಿನ ಪ್ರೀತಿ, ವಿಶ್ವಾಸದಿಂದ ಮತ್ತೂಮ್ಮೆ ಪಿ.ಸಿ. ಗದ್ದಿಗೌಡರ ಅವರಿಗೆ ಟಿಕೆಟ್ ನೀಡಿದ್ದಾರೆ ಎಂದ ಅವರು, ಲೋಕಸಭಾ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಮತ್ತೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದರು.
ಸಭೆಯಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಲಿಂಗರಾಜ ಪಾಟೀಲ, ಸಂಸದ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ| ಮುರುಗೇಶ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಪಿ.ಎಚ್. ಪೂಜಾರ, ಬಿಜೆಪಿ ಬೆಳಗಾವಿ ವಿಭಾಗದ ಸಹ ಪ್ರಭಾರಿ ಬಸವರಾಜ ಯಂಕಂಚಿ, ಅಶೋಕ ಲಿಂಬಾವಳಿ, ಬಿಜೆಪಿ ತಾಲೂಕು ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಮೋಹನ ಜಾಧವ, ಎಂ.ಎಂ. ಶಂಭೋಜಿ, ಮಲ್ಲಿಕಾರ್ಜುನ ಅಂಗಡಿ, ಕೆ.ವಿ. ಪಾಟೀಲ, ಭರತ ಬಾರಕೇರ, ಹೂವಪ್ಪ ರಾಠೊಡ, ಹೊಳೆಬಸು ಬಾಳಶೆಟ್ಟಿ ಇತರರಿದ್ದರು.