Advertisement

ದುರಂಹಕಾರಿ ಪ್ರತಾಪ್‌ ಸಿಂಹ ಸೋಲಿಸಿ: ಯತೀಂದ್ರ

10:00 PM Apr 02, 2019 | Team Udayavani |

ಮೈಸೂರು: ಬಿಜೆಪಿ ಸರ್ಕಾರದ ವೈಫ‌ಲ್ಯಗಳನ್ನು ಮನೆ ಮನೆಗೆ ತಿಳಿಸಿ, ಜೆಡಿಎಸ್‌ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರಳ ಸಜ್ಜನರಾದ ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ರವರನ್ನು ಹೆಚ್ಚುಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ದುರಂಹಕಾರದ ಮಾತಾಡುವ ಪ್ರತಾಪ್‌ಸಿಂಹರನ್ನು ಸೋಲಿಸಬೇಕೆಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.

Advertisement

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕೋಟೆಹುಂಡಿ, ಡಿ.ಸಾಲುಂಡಿ, ಧನಗಳ್ಳಿ, ಗೋಪಾಲಪುರ, ಜಯಪುರ, ಹಾರೋಹಳ್ಳಿ, ಮಾರ್ಬಳ್ಳಿ, ಸಿಂಧುವಳ್ಳಿ, ದೂರ, ಶ್ರೀರಾಂಪುರ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು.

ಸಾಮಾಜಿಕ ಸಾಮರಸ್ಯವನ್ನು ಕಲಕುವ ಮತಾಂಧ ಸಿದ್ಧಾಂತವನ್ನು ಹೊಂದಿರುವ ಬಿಜೆಪಿ ಪಕ್ಷವನ್ನು ಕಿತ್ತೂಗೆಯಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ಮೈತ್ರಿ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಕೋರಿದರು.

ಹೆದರಿಸಲು ಐಟಿ ದಾಳಿ: ಕೇಂದ್ರದಲ್ಲಿ ಮನಮೋಹನಸಿಂಗ್‌ ಪ್ರಧಾನಿಯಾಗಿದ್ದಾಗ 72 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದ್ದರು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ರೈತರ 50 ಸಾವಿರವರೆಗಿನ ಸಾಲ ಮನ್ನಾ ಮಾಡಿದ್ದರು. ಎಚ್‌.ಡಿ. ಕುಮಾರಸ್ವಾಮಿಮುಖ್ಯಮಂತ್ರಿಯಾಗಿ 43 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದ್ದಾರೆ.

ಆದರೆ, 5 ವರ್ಷ ಅಧಿಕಾರ ನಡೆಸಿದ ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸಿಲ್ಲ. ಸ್ಮಾರ್ಟ್‌ಸಿಟಿ ಮಾಡಿಲ್ಲ, ಕಪ್ಪುಹಣ ತಂದಿಲ್ಲ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕಿಲ್ಲದ ಬಿಜೆಪಿಯವರು ಸ್ವಾರ್ಥಕೋಸ್ಕರ ಐಟಿ ದಾಳಿ ಮಾಡಿಸಿ ಹೆದರಿಸಲು ನೋಡುತ್ತಿದ್ದಾರೆ. ಇಂತಹ ಬಿಜೆಪಿ ಸರ್ಕಾರ ತೊಲಗಬೇಕು ಎಂದು ವಾಗ್ಧಾಳಿ ನಡೆಸಿದರು.

Advertisement

ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ರಾಹುಲ್‌ಗಾಂಧಿ ಪ್ರಧಾನಿಯಾಗುತ್ತಾರೆ. ಬಡವರಿಗೆ ತಿಂಗಳಿಗೆ 6 ಸಾವಿರದಂತೆ ವರ್ಷಕ್ಕೆ 72 ಸಾವಿರ ರೂ. ಖಾತೆಗೆ ಹಾಕುತ್ತಾರೆ. ಶೇ. 33 ಮಹಿಳೆಯರಿಗೆ ಮೀಸಲಾತಿ ನೀಡುತ್ತಾರೆ ಎಂದರು.

ಸಚಿವರಾದ ಜಿ.ಟಿ. ದೇವೇಗೌಡ, ಸಾ.ರಾ. ಮಹೇಶ್‌ ಅವರು ಸಂಪೂರ್ಣ ಸಹಕಾರ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಸಿ.ಎನ್‌.ಮಂಜೇಗೌಡ,

ಎಪಿಎಂಸಿ ಅಧ್ಯಕ್ಷ ಪ್ರಭುಸ್ವಾಮಿ, ಮಂಜುಳ ಮಾನಸ, ನಂದಿನಿ ಚಂದ್ರಶೇಖರ್‌, ಗುರುಪಾದಸ್ವಾಮಿ, ಜೆ.ಜೆ. ಆನಂದ, ತಾ.ಪಂ. ಸದಸ್ಯರಾದ ಸಿ.ಎಂ. ಸಿದ್ದರಾಮೇಗೌಡ, ಮಾರ್ಬಳ್ಳಿ ಕುಮಾರ್‌, ಕೋಟೆಹುಂಡಿ ಮಹದೇವ, ಗ್ರಾಪಂ. ಅಧ್ಯಕ್ಷರಾದ ಬಸವರಾಜು ಮೊದಲಾದವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next