ಸೇಡಂ: ಸೋತಾಗ ಎದೆಗುಂದದೆ ಗೆದ್ದಾಗ ಹಿಗ್ಗದೆ ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.
ಪಟ್ಟಣದ ತಾಲೂಕು ಕ್ರಿಡಾಂಗಣದಲ್ಲಿ ಜಿಪಂ ಕಲಬುರಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಜಂಟಿಯಾಗಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪು ಗೊಳ್ಳಬೇಕಾದರೆ ನಮ್ಮಲ್ಲಿನ ಮನೋಭಾವ ಸದ್ಗುಣ ಗಳಿಂದ ಕೂಡಿರಬೇಕು. ಅಂದಾಗ ಮಾತ್ರ ನಿರೀಕ್ಷೆಯಂತೆ ಸಾಧನೆ ಸಾಧ್ಯವಾಗಲಿದೆ. ಸತತ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಯಶಸ್ಸು ಕಟ್ಟಿಟ್ಟ ಬುತ್ತಿಯಾಗಿದೆ. ಸದಾ ದೈಹಿಕ ಕಸರತ್ತಿನಂತಹ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಆರೋಗ್ಯಯುತ ಜೀವನ ನಡೆಸಲು ಪೂರಕವಾಗಲಿದೆ ಎಂದು ಹೇಳಿದರು.
ಜಿಪಂ ಸದಸ್ಯ ದಾಮೋದರೆಡ್ಡಿ ಪಾಟೀಲ ಸಿಲಾರಕೋಟ, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಮಾತನಾಡಿದರು. ತಾಪಂ ಅಧ್ಯಕ್ಷೆ ಸುರೇಖಾ ರಾಜಶೇಖರ ಪುರಾಣಿಕ, ತೋಟಗಾರಿಕೆ ಮಹಾಮಂಡಳಿ ರಾಜ್ಯಾಧ್ಯಕ್ಷ ಬಸವರಾಜ ಪಾಟೀಲ ಊಡಗಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಸುದರ್ಶನರೆಡ್ಡಿ ಪಾಟೀಲ, ಎಪಿಎಂಸಿ ಅಧ್ಯಕ್ಷ ಗುರುನಾಥರೆಡ್ಡಿ ಪಾಟೀಲ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಶಂಕ್ರಯ್ಯಸ್ವಾಮಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರವಿಕುಮಾರ ಕೋಡ್ಲಾ, ಶಿಕ್ಷಕರ ಪ್ರತಿಭಾ ಪರಿಷತ್ ಅಧ್ಯಕ್ಷ ಅಶೋಕರೆಡ್ಡಿ ಚಿಲುಮೆ, ಕರೆಪ್ಪ ಪಿಲ್ಲಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗಯ್ಯಸ್ವಾಮಿ, ಮೋನಪ್ಪ ವಿಶ್ವಕರ್ಮ, ಲಾಡಪ್ಪ ಸಿಂಗೆ, ನಿಸಾರ ಭಾಗವಾನ, ದೇವಿಂದ್ರಪ್ಪ ಪಂಚಾಳ, ಮಣಿಸಿಂಗ್ ಇದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದರ ಸ್ವಾಗತಿಸಿದರು. ಶಿಕ್ಷಕ ಸಂತೋಷ ಕುಲಕರ್ಣಿ ನಿರೂಪಿಸಿದರು. ನಾಗಯ್ಯ ಮಠ ವಂದಿಸಿದರು.