Advertisement
ತಾಲೂಕಿನ ನೆರ್ನಕಲ್ಲು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 60 ವರ್ಷಗಳಿಂದ ತಾಲೂಕಿನಲ್ಲಿ ಸ್ಥಳೀಯ ಎರಡು ಪ್ರಭಾವಿ ಕುಟುಂಬಗಳ ಆಡಳಿತದಲ್ಲಿ ತಾಲೂಕು ಅಭಿವೃದ್ಧಿ ಕುಂಠಿತಗೊಂಡಿದೆ. ಇದರ ಜೊತೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತ್ತೂಬ್ಬ ವ್ಯಕ್ತಿ ಕ್ಷೇತ್ರಕ್ಕೆ ಆಗಮಿಸಿ ಶಾಸಕರಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲಎಂದು ಮಾಜಿ ಶಾಸಕ ಎಂ.ಸಿ.ಸುಧಾಕರ್ ಹಾಗೂ ದಿ.ಕೆ. ಎಂ. ಕೃಷ್ಣಾರೆಡ್ಡಿ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.
ರಾಜಕೀಯ ನಾಯಕರು ಮಾತ್ರ ಕ್ಷೇತ್ರದಲ್ಲಿ ನಾವು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ಎಂದು ಜನರನ್ನು ವಂಚಿಸುತ್ತಿದ್ದಾರೆ ಎಂದು ಹಾಲಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ: ಕಳೆದ ಒಂದು ವರ್ಷದಿಂದ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಹಲವು ರೀತಿಯ ಸಮಾಜ ಸೇವಾ ಕಾರ್ಯಕ್ರಮ ಹಮ್ಮಿಕೊಂಡು ಬಡವರು, ದಿನದಲಿತರು, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ನೆರವಿಗೆ ಧಾವಿಸಿ ಅವರ ಕಷ್ಟ
ಸುಖಗಳಿಗೆ ಸ್ಪಂದಿಸಿದ್ದೇನೆ. ತಮ್ಮ ಸಮಾಜಮುಖೀ ಕಾರ್ಯ ಗುರುತಿಸಿರುವ ಸಂಸದ ಕೆ.ಎಚ್.ಮುನಿಯಪ್ಪ ಕಾಂಗ್ರೆಸ್ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಂತಾಮಣಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಮತದಾರರು ಆಶೀರ್ವದಿಸಿದರೆ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತಾವು ಏನು ಎಂಬುದನ್ನು ತೋರಿಸುತ್ತೇನೆ ಎಂದು ತಿಳಿಸಿದರು.
Related Articles
Advertisement