Advertisement

ಉಡುಪಿ ಶ್ರೀ ಕೃಷ್ಣ ಮಠಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

09:19 AM Mar 29, 2019 | keerthan |

ಉಡುಪಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Advertisement

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಾಂದ್ಲಾಜೆಯವರ ನಾಮಪತ್ರ ಸಲ್ಲಿಕೆಯ ಹಿನ್ನಲೆಯಲ್ಲಿ ಉಡುಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಇದೇ ವೇಳೆ ಪರ್ಯಾಯ ಶ್ರೀ ಪಲಿಮಾರು ವಿದ್ಯಾಧೀಶ ತೀರ್ಥ ಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ರಕ್ಷಣಾ ಸಚಿವರ ಮಠದ ಭೇಟಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಾಂದ್ಲಾಜೆ, ಶಾಸಕ ರಘುಪತಿ ಭಟ್ ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next