Advertisement

ಬೆಳಗಾವಿಯ 700 ಎಕರೆ ಜಮೀನು ಹಸ್ತಾಂತರಕ್ಕೆ ರಕ್ಷಣಾ ಸಚಿವರ ಆಶ್ವಾಸನೆ: ಸಿಎಂ

07:42 PM May 11, 2022 | Team Udayavani |

ನವದೆಹಲಿ: ಬೆಳಗಾವಿಯಲ್ಲಿ 700 ಎಕರೆ ರಾಜ್ಯ ಸರ್ಕಾರದ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದ್ದು, ಈ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಅವರು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಲಾಯಿತು ಎಂದರು.

ಬೆಳಗಾವಿಯಲ್ಲಿ ಐ.ಟಿ ಪಾರ್ಕ್ ಮಾಡುವ ಉದ್ದೇಶವಿದೆ. ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗುದೆ. ಅದಕ್ಕಾಗಿ ಈ ಜಮೀನನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕ ವಾಗಿ ಸ್ಪಂದಿಸಿದ ಸಿಂಗ್ ಅವರು, ಸಂಬಂಧಪಟ್ಟವರ ಜತೆ ಮಾತನಾಡಿ ವರದಿ ತರಿಸಿಕೊಂಡು ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ ಬಗ್ಗೆ ಅವಧಿ ವಿಸ್ತರಣೆಗೆ ಕೋರಲಾಗಿದ್ದ ಹಿನ್ನೆಲೆಯಲ್ಲಿ ವಿಸ್ತರಣೆ ನೀಡಿದ್ದಾರೆ. ಶಾಲೆಯ ಉದ್ಘಾಟನೆಗೆ ಕೇಂದ್ರ ರಕ್ಷಣಾ ಸಚಿವರನ್ನು ಆಹ್ವಾನಿಸಲಾಯಿತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next