Advertisement

ದೀನ್‌ದಯಾಳ್‌ ಜನ್ಮದಿನಾಚರಣೆ

12:42 PM Sep 28, 2020 | Suhan S |

ಸುಳ್ಯ, ಸೆ. 27: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಂದಾಳು ಪಂಡಿತ್‌ ದೀನ್‌ದಯಾಳ್‌ ಉಪಾಧ್ಯಾಯ ಅವರ ಜನ್ಮದಿನವನ್ನು ಸುಳ್ಯದ ಬಿಜೆಪಿ ಕಚೆೇರಿಯಲ್ಲಿ ಸೆ. 27ರಂದು ಆಚರಿಸಲಾಯಿತು.

Advertisement

ಮಂಡಲ ಸಮಿತಿ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಸ್‌. ಅಂಗಾರ, ಸುಳ್ಯ ಸಿ.ಎ. ಬ್ಯಾಂಕ್‌ ಮಾಜಿ ಅಧ್ಯಕ್ಷ ಪಿ.ಕೆ. ಉಮೇಶ್‌ ಉಪಸ್ಥಿತರಿದ್ದರು.

ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ರಾಕೇಶ್‌ ರೈ ಕೆಡೆಂಜಿ ಅವರು ಪಂಡಿತ್‌  ದೀನ್‌ ದಯಾಳ್‌  ಉಪಾಧ್ಯಾಯರು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸಲ್ಲಿಸಿದ ಕೊಡುಗೆಗಳ ಬಗ್ಗೆ ಮಾತನಾಡಿದರು. ಪಂಡಿತ್‌ ದೀನ್‌ದಯಾಳ್‌ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್‌ ವಳಲಂಬೆ, ಜಿಲ್ಲಾ  ಪ್ರಧಾನ ಕಾರ್ಯದರ್ಶಿ ಮುಳಿಯ ಕೇಶವ ಭಟ್‌, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್‌ ನಾಯಕ್‌, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಸಹಿತ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋಧ್‌ ಶೆಟ್ಟಿ ಮೇನಾಲ ಸ್ವಾಗತಿಸಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕೇರ್ಪಳ ವಂದಿಸಿದರು.

ಶ್ರದ್ಧಾಂಜಲಿ : ಇತ್ತೀಚೆಗೆ ಅಗಲಿದ ಕೇಂದ್ರ ಸಚಿವ ಸುರೇಶ್‌ ಅಂಗಡಿ, ರಾಜ್ಯಸಭಾ ಸಂಸದ ಅಶೋಕ್‌ ಗಸ್ತಿ, ಮಾಜಿ ವಿದೇಶಾಂಗ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಜಸ್ವಂತ್‌ ಸಿಂಗ್‌, ಸ್ವರಮಾಂತ್ರಿಕ ಎಸ್‌.ಬಿ. ಬಾಲಸುಬ್ರಹ್ಮಣ್ಯಂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next