Advertisement

ಕನ್ನಡ ಸಾಹಿತ್ಯ ಲೋಕದಲ್ಲಿ ಆಯಾಮ ಸೃಷ್ಟಿಸಿದವರು ದೇಜಗೌ

12:42 PM Oct 01, 2018 | |

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಆಯಾಮ ಸೃಷ್ಟಿಸಿದ ಕೀರ್ತಿ ಡಾ.ದೇಜಗೌ ಅವರಿಗೆ ಸಲ್ಲುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಅಖೀಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಭಾನುವಾರ ಕಸಾಪ ಶ್ರೀ ಕೃಷ್ಣ ಪರಿಷನ್ಮಂದಿರದಲ್ಲಿ ಏರ್ಪಡಿಸಿದ್ದ ನಾಡೋಜ ಡಾ.ದೇಜಗೌ ಜನ್ಮಶತಮಾನೋತ್ಸವ ಹಾಗೂ ವಿಶ್ವಚೇತನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುವೆಂಪು ಶಿಷ್ಯರಾಗಿ ಅವರ ಕನಸುಗಳನ್ನು ಸಾಕಾರಗೊಳಿಸಲು ದೇಜಗೌ ಪ್ರಯತ್ನಿಸಿದ್ದರು ಎಂದು ತಿಳಿಸಿದರು.

ಜಾನಪದ ವಿಶ್ವವಿದ್ಯಾನಿಲಯಗಳ ಸ್ಥಾಪನೆ ಬಗ್ಗೆ ದೇ.ಜವರೇಗೌಡ ಅವರು ಅಪಾರ ಕಾಳಜಿ ತೋರಿಸಿದ್ದರು. ಆದರೆ ಇಂದು ಈ ಜಾನಪದ ವಿವಿಗಳಲ್ಲಿ ಜಾನಪದದ ಬಗ್ಗೆ ಹೆಚ್ಚು ಅಧ್ಯಾಯನವಾಗುತ್ತಿಲ್ಲ. ಜಾನಪದ ಉಳಿಯುವ ನಿಟ್ಟಿನಲ್ಲಿ ಮತ್ತಷ್ಟು ಅಧ್ಯಯನಗಳು ನಡೆಯಬೇಕು ಎಂದು ಹೇಳಿದರು.

ಇದೇ ವೇಳೆ ಕಥೆಗಾರ ಡಾ.ಕೆ.ಸತ್ಯ ನಾರಾಯಣ ಸೇರಿದಂತೆ ಹಲವರಿಗೆ ವಿಶ್ವಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಸಂಸ್ಕೃತ ವಿವಿ ಕುಲಪತಿ ಡಾ.ಪದ್ಮಾಶೇಖರ್‌, ಕವಿ ಟಿ.ಸತೀಶ್‌ ಜವರೇಗೌಡ,ಅಖೀಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಸುರೇಶ್‌ ಜೀವನ್ಮುಖೀ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next