Advertisement

Supreme Court: ಕೊಲಿಜಿಯಂ ಶಿಫಾರಸು ಅಂಗೀಕಾರಕ್ಕೆ ವಿಳಂಬ- ನಾಳೆ ಸುಪ್ರೀಂನಲ್ಲಿ ವಿಚಾರಣೆ

10:55 PM Oct 07, 2023 | Team Udayavani |

ನವದೆಹಲಿ:ಕೊಲಿಜಿಯಂ ಶಿಫಾರಸು ಮಾಡಿರುವ ಹೆಸರುಗಳಿಗೆ ಸಮ್ಮತಿ ಸೂಚಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದೆ. ನ್ಯಾ.ಸಂಜಯ್‌ ಕಿಶನ್‌ ಕೌಲ್‌ ಹಾಗೂ ನ್ಯಾ.ಸುಧಾಂಶು ಧುಲಿಯಾ ನೇತೃತ್ವದ ನ್ಯಾಯಪೀಠ ಅರ್ಜಿಗಳ ವಿಚಾರಣೆ ನಡೆಸಲಿದೆ.

Advertisement

ಸೆ.26ರಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ನೇಮಕದಲ್ಲಿ ಕೇಂದ್ರದ ವಿಳಂಬವನ್ನು ಪ್ರಶ್ನಿಸಿ ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ ಅವರಿಗೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕ್ಕೆ ಸೂಚನೆ ನೀಡಿತ್ತು ಅವರು ವಾರದ ಗಡುವು ಕೇಳಿದ್ದರು. ಅ.9ರ ವಿಚಾರಣೆಯಲ್ಲಿ ಅಟಾರ್ನಿ ಜನರಲ್‌ ಈ ಬಗ್ಗೆ ನ್ಯಾಯಪೀಠಕ್ಕೆ ಮಾಹಿತಿ ನೀಡಲಿದ್ದಾರೆ. ಈ ಅರ್ಜಿ ಜತೆಗೆ ಸುಪ್ರೀಂ ಆದೇಶವನ್ನು ಪಾಲಿಸುವಲ್ಲಿ ವಿಳಂಬಗೊಂಡಿದ್ದಕ್ಕೆ ಕೇಂದ್ರ ಕಾನೂನು ಸಚಿವಾಲಯದ ವಿರುದ್ಧ ಕ್ರಮಕ್ಕೆ ಆಗ್ರಹಿಸಿರುವ ಅರ್ಜಿಯನ್ನೂ ಸುಪ್ರೀಂ ವಿಚಾರಣೆ ನಡೆಸಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next