Advertisement

ಪರಿಹಾರ ನೀಡಲು ವಿಳಂಬ; ಎರಡು ಸರ್ಕಾರಿ ಬಸ್‌ ಜಪ್ತಿ

11:54 AM Sep 14, 2019 | Team Udayavani |

ಹಾವೇರಿ: ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಿಗೆ ಸಂಬಂಧಿಸಿ ಸಕಾಲಕ್ಕೆ ಪರಿಹಾರ ನೀಡದೇ ಇರುವುದರಿಂದ ನ್ಯಾಯಾಲಯದ ಆದೇಶದಂತೆ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್‌ಗಳನ್ನು ಜಪ್ತಿ ಮಾಡಿದ ಘಟನೆ ಶುಕ್ರವಾರ ನಗರದಲ್ಲಿ ನಡೆದಿದೆ.

Advertisement

ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣದಲ್ಲಿ ಹೆಚ್ಚುವರಿ ದಿವಾಣಿ ನ್ಯಾಯಾಲಯವು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 15,08000ರೂ.ಗಳನ್ನು ಬಡ್ಡಿಸಹಿತ ಮೃತ ವ್ಯಕ್ತಿ ಕುಟುಂಬಕ್ಕೆ ಹಾಗೂ ಗಾಯಗೊಂಡ ವ್ಯಕ್ತಿಗೆ ಪರಿಹಾರ ನೀಡಲು ಆದೇಶಿಸಿತ್ತು. ನ್ಯಾಯಾಲಯದ ಆದೇಶದನ್ವಯ ಪರಿಹಾರದ ಹಣವನ್ನು ಸಕಾಲಕ್ಕೆ ಪಾವತಿಸದೇ ಇರುವುದರಿಂದ ಸಾರಿಗೆ ನಿಗಮದ ಎರಡು ಬಸ್‌ಗಳನ್ನು ಜಪ್ತಿ ಮಾಡಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದೆ.

ಮೇಡ್ಲೇರಿಯ ದ್ಯಾಮವ್ವ ಲಕ್ಷ್ಮಣ ಪೂಜಾರ ಹಾಗೂ ಇತರರು ಈ ಪ್ರಕರಣದ ಅರ್ಜಿದಾರರಾಗಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲರು ಹಾಗೂ ಮಾಜಿ ಜಿಲ್ಲಾ ಸರ್ಕಾರಿ ವಕೀಲರಾದ ಎನ್‌.ಎಸ್‌. ಪಾಟೀಲ ವಾದ ಮಂಡಿಸಿ, ಬಸ್‌ಗಳನ್ನು ಜಪ್ತಿ ಮಾಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next