Advertisement

ಕಾಮಗಾರಿ ವಿಳಂಬ; ಗುತ್ತಿಗೆದಾರರಿಗೆ ದಂಡ

03:40 PM Sep 27, 2020 | Suhan S |

ಹಾಸನ: ನಗರದ ಸ್ಥಳೀಯ ಸಂಸ್ಥೆಗಳ ‌ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಮಂದಗತಿಯಲ್ಲಿದ್ದರೆ ಪ್ರಗತಿಯ ಹಂತವಾರು ಗುತ್ತಿಗೆದಾರರಿಗೆ ದಂಡ ವಿಧಿಸಿ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ನಗರಾಭಿವೃದ್ಧಿ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯಲ್ಲಿರುವಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಬೇಕು. ಬಾಕಿ ಉಳಿದಿರುವ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಗುಣಮಟ್ಟದ ಸಲಕರಣೆ ಬಳಸಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಬೇಕು ಎಂದು ಸೂಚನೆ ನೀಡಿದರು.

ನಗರ ಪ್ರದೇಶದಲ್ಲಿ ಕುಡಿಯುವ ನೀರು ಒದಗಿಸುವಲ್ಲಿ ಯಾವುದಾದರೂ ಸಮಸ್ಯೆಗಳಿದ್ದಲ್ಲಿ ಪರ್ಯಾಯ ಕ್ರಿಯಾಯೋಜನೆ ಮಾಡಿ ನೀರು ಪೂರೈಕೆ ಮಾಡಬೇಕು. ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್‌: ಆಲೂರು ತಾಲೂಕಿನಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಸೂಕ್ತ ನಿವೇಶನ ಗುರುತಿಸಬೇಕು. ಕರ ವಸೂಲಾತಿ ಕಡಿಮೆಯಾಗಿದ್ದು ಬಾಕಿದಾರರೆಲ್ಲರಿಗೂ ನೋಟಿಸ್‌ ಜಾರಿ ಮಾಡಿ ತ್ವರಿತವಾಗಿ ತೆರಿಗೆ ವಸೂಲಿ ಮಾಡಬೇಕು ಎಂದು ಅವರು ಇದೇವೇಳೆ ತಿಳಿಸಿದರು.

ಘನ ತ್ಯಾಜ್ಯ ಲೇವಾರಿಗೆ ಎಲ್ಲಾ ತಾಲೂಕುಗಳಲ್ಲಿಯೂ ಲಭ್ಯವಿರುವ ಸೂಕ್ತ ಸ್ಥಳಾ ವಕಾಶದ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಯವರು, ಘನ ತ್ಯಾಜ್ಯ ಹಾಗೂ ಮಾರುಕಟ್ಟೆ ತ್ಯಾಜ್ಯವನ್ನು ಪ್ರತ್ಯೇಕಿಸಿ ಹೆಚ್ಚಿನ ಗೊಬ್ಬರದ ತಯಾರು ಮಾಡಬೇಕು. ಎಷ್ಟು ಟನ್‌ ಗೊಬ್ಬರ ಮಾರಾಟ ಮಾಡಲಾಗಿದೆ ಮತ್ತು ಗಳಿಸಿದ ಹಣದ ಬಗ್ಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ವಾಹನ ಖರೀದಿಸಿ: ಪ್ಲಾಸ್ಟಿಕ್‌ ನಿಷೇಧವಾಗಿದ್ದರೂ‌ಬಳಸುತ್ತಿರುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಿ ಪ್ಲಾಸ್ಟಿಕ್‌ ನಿಷೇಧಕೆ R ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಘನತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ವಾಹನಗಳ ಅವಶ್ಯಕತೆ ಇದ್ದಲ್ಲಿ ಖರೀದಿ ಮಾಡಿ ಎಂದು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗೆ ಸಲಹೆ ನೀಡಿದರು. ಪೌರ ಕಾರ್ಮಿಕರಿಗೆ ಗೃಹ ಭಾಗ್ಯದಲ್ಲಿ ಮನೆ ನಿರ್ಮಿಸಲು ಎಲ್ಲಾ ತಾಲೂಕುಗಳಲ್ಲಿಯೂ ನಿವೇ ಶನ ಗುರುತಿಸಬೇಕು. ಅಗತ್ಯವಿದ್ದರೆ ಖಾಸಗಿಯವರಿಂದಲೂ ಖರೀದಿಸಬಹುದು. ಆನಂತರ ಪೌರಕಾರ್ಮಿಕರ ಹೆಸರಿಗೆ ಹಕ್ಕು ಪತ್ರ ನೀಡುವಂತೆ ಅವರು ಅಧಿಕಾರಿಗಳಿಗೆ ಡೀಸಿ ಸೂಚಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಜಗದೀಶ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಎಂಜಿನಿಯರ್‌ ಬಿ.ಎಸ್‌. ಮಂಜುನಾಥ್‌, ಕಾರ್ಯ ಪಾಲಕ ಎಂಜಿನಿಯರ್‌ ಶಿವಾನಂದ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next