ಚಿಕ್ಕಮಗಳೂರು: ಜಿಲ್ಲೆಯ ನೀರಾವರಿ ಯೋಜನೆ ಕಾರ್ಯಗತಗೊಳಿಸುವ ಸಲುವಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬಳಿ ನಿಯೋಗ ಕರೆದೊಯ್ದು ವಿಶೇಷ ಅನುದಾನ ತರಲಾಗುವುದು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್. ಎಚ್. ದೇವರಾಜ್ ತಿಳಿಸಿದರು.
ಶುಕ್ರವಾರ ನಗರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಹಣ ತಂದೆ ತರುತ್ತೇವೆ. ಜಿಲ್ಲೆಯ ಒತ್ತುವರಿ ಸಮಸ್ಯೆ, ನೀರಾವರಿ ಸಮಸ್ಯೆ, ದತ್ತಪೀಠ ಸಮಸ್ಯೆಗೆ ನಿವಾರಣೆಗೆ ಜೆಡಿಎಸ್ ಇಬ್ಬರು ವಿಧಾನ ಪರಿಷತ್ ಸದಸ್ಯರು ಬದ್ಧವಾಗಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೈತರ ಎರಡು ಲಕ್ಷ ರೂ. ಸಾಲಮನ್ನಾ ಮಾಡುವ ಮೂಲಕ ಉತ್ತಮ ನಿರ್ಧಾರ ತೆಗೆದಕೊಂಡಿದ್ದಾರೆ. ರಾಜ್ಯದ ರೈತರ 34 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ ಕುಮಾರಸ್ವಾಮಿಯವರನ್ನು ರೈತರು ಪ್ರಶಂಸಿಸಿದರೆ ವಿರೋಧ ಪಕ್ಷದವರು ಜನರನ್ನು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಐತಿಹಾಸಿಕ ನಿರ್ಧಾರವನ್ನು ಟೀಕಿಸುತ್ತಿರುವುದು ನಾಚೀಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ರೈತರ ಸಾಲಮನ್ನಾ ಮಾಡುವುದರೊಂದಿಗೆ ಇಸ್ರೇಲ್ ಮಾದರಿ ಕೃಷಿ ಪದ್ಧತಿ, ಬಾಣಂತಿಯರಿಗೆ ಒಂದು ಸಾವಿರ ಸಹಾಯಧನ, ಉದ್ಯೋಗ ಸೃಷ್ಟಿ ಸೇರಿದಂತೆ ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುವ ಬಜೆಟ್ ನೀಡಿದ್ದಾರೆ. ಇಂತಹ ಜನಪರ ಬಜೆಟನ್ನು ವಿರೋಧ ಪಕ್ಷದವರು ಸ್ವಾಗತಿಸುವುದನ್ನು ಬಿಟ್ಟು ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ಲಾಭ ಆಗಿಲ್ಲ ಎಂದು ವಿರೋಧಿ ಸುತ್ತಿದ್ದಾರೆ ಇದು ಖಂಡನೀಯ ಎಂದರು.
ಬಜೆಟ್‌ನಲ್ಲಿ ಬೆಳೆಸಾಲವನ್ನು ಮಾತ್ರ ಮನ್ನಾ ಮಾಡಲಾಗಿದೆ ಎಂದು ಜನರ ದಾರಿತಪ್ಪಿಸುವ ಕೆಲಸ ವಿರೋಧ ಪಕ್ಷದವರು ಮಾಡುತ್ತಿದ್ದಾರೆ. ಬಜೆಟ್‌ನಲ್ಲಿ ವಾಣಿಜ್ಯ ಬೆಳೆಗಳಾದ ಕಾಫಿ, ಅಡಿಕೆ, ತೆಂಗು ಬೆಳೆಗಾರರಿಗೂ ಸಾಲಮನ್ನಾ ಅನ್ವಯವಾಗುತ್ತದೆ. ಬಜೆಟ್ ಬಗ್ಗೆ ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದರು.
ಕಾಫಿ ಮಂಡಳಿ ನಿಷ್ಕ್ರಿಯವಾಗಿದೆ. ಕಾಫಿ ಬೆಳೆಗಾರರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಬಾಗಿಲು ಹಾಕುವ ಸ್ಥಿತಿಗೆ ತಲುಪಿದೆ. ಜಿಲ್ಲೆಗೆ ಈ ಭಾಗದ ಸಂಸದರ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, 4 ವರ್ಷದಲ್ಲಿ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರೈತರಿಗೆ ಬಿಡಿಗಾಸು
ನೀಡಿಲ್ಲ ಎಂದರು. ಮಂಜಪ್ಪ, ರಮೇಶ್, ಜಯರಾಜ ಅರಸ್ ಇದ್ದರು.
ಬಜೆಟ್‌ನಲ್ಲಿ ಬೆಳೆಸಾಲವನ್ನು ಮಾತ್ರ ಮನ್ನಾ ಮಾಡಲಾಗಿದೆ ಎಂದು ಜನರ ದಾರಿತಪ್ಪಿಸುವ ಕೆಲಸ ವಿರೋಧ ಪಕ್ಷದವರು ಮಾಡುತ್ತಿದ್ದಾರೆ. ಬಜೆಟ್‌ನಲ್ಲಿ ವಾಣಿಜ್ಯ ಬೆಳೆಗಳಾದ ಕಾಫಿ, ಅಡಿಕೆ, ತೆಂಗು ಬೆಳೆಗಾರರಿಗೂ ಸಾಲಮನ್ನಾ ಅನ್ವಯವಾಗುತ್ತದೆ. ಬಜೆಟ್ ಬಗ್ಗೆ ಸರಿಯಾಗಿ ತಿಳಿದುಕೊಂಡು
ಮಾತನಾಡಬೇಕು ಎಂದು ತಿರುಗೇಟು ನೀಡಿದರು. ಕಾಫಿ ಮಂಡಳಿ ನಿಷ್ಕ್ರಿಯವಾಗಿದೆ. ಕಾಫಿ ಬೆಳೆಗಾರರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಬಾಗಿಲು ಹಾಕುವ ಸ್ಥಿತಿಗೆ ತಲುಪಿದೆ. ಜಿಲ್ಲೆಗೆ ಈ ಭಾಗದ ಸಂಸದರ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, 4 ವರ್ಷದಲ್ಲಿ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರೈತರಿಗೆ ಬಿಡಿಗಾಸು ನೀಡಿಲ್ಲ ಎಚ್.ಎಚ್.ದೇವರಾಜ್