ಹೊಸದಿಲ್ಲಿ: ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಹುದ್ದೆಗೆ ನೀಡಿರುವ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಕಾಂಗ್ರೆಸ್ ಕಾಯಕರ್ತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದು, ಈ ವೇಳೆ ಸ್ಥಳದಲ್ಲಿದ್ದವರು ತಡೆದಿದ್ದಾರೆ.
ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿ ಮುಂದುವರಿಯಬೇಕು .ಇಲ್ಲವಾದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಘೋಷಣೆಗಳನ್ನು ಕೂಗಿದ್ದಾನೆ.
ಲೋಕಸಭಾ ಚುನಾವಣೆಯ ಸೋಲಿನ ಬಳಿಕ ರಾಹುಲ್ ಗಾಂಧಿ ಅವರು ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಹಿರಿಯ ನಾಯಕರಾದಿ ಕಾಂಗ್ರೆಸ್ ಸಂಸದರು, ಕಾರ್ಯಕರ್ತರ ಮನವಿ ಮಾಡಿದರು ರಾಹುಲ್ ರಾಜೀನಾಮೆ ನಿರ್ಧಾರದಿಂದ ಹಿಂದೆಸರಿದಿಲ್ಲ.