Advertisement

INDIA ಮಹತ್ವದ ಸಭೆ; ಎಕ್ಸಿಟ್ ಪೋಲ್ ಚರ್ಚೆಯಲ್ಲಿ ಪಾಲ್ಗೊಳ್ಳಲು ಎಲ್ಲಾ ಪಕ್ಷಗಳ ನಿರ್ಧಾರ

05:39 PM Jun 01, 2024 | Team Udayavani |

ಹೊಸದಿಲ್ಲಿ: ಲೋಕಸಭಾ ಚುನಾವಣೆಯಾ ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿರುವ ದಿನ ಇಂಡಿಯಾ ಮೈತ್ರಿಕೂಟದ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಶನಿವಾರ ಮಹತ್ವದ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.

Advertisement

ಖರ್ಗೆ ಅವರು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ “ಇಂಡಿಯಾ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲುತ್ತದೆ” ಎಂದು ಹೇಳಿದ್ದಾರೆ.

“ನಾವು ಒಗ್ಗಟ್ಟಾಗಿದ್ದೇವೆ ಮತ್ತು ನಾವು ಒಗ್ಗಟ್ಟಿನಿಂದ ಇರುತ್ತೇವೆ, ನಮ್ಮನ್ನು ವಿಭಜಿಸಲು ಪ್ರಯತ್ನಿಸಬೇಡಿ.” ಎಂದು ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ ಹೊರ ಹಾಕಿದರು.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಾತನಾಡಿ”ಉತ್ತರ ಪ್ರದೇಶದಲ್ಲಿ, ಬಿಜೆಪಿ ಎಲ್ಲಾ ಸ್ಥಾನಗಳನ್ನು ಕಳೆದುಕೊಳ್ಳುತ್ತದೆ. ಇಂಡಿಯಾ ಮೈತ್ರಿಕೂಟವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ. ನಿರುದ್ಯೋಗ, ಬೆಲೆ ಏರಿಕೆ, ಜಿಎಸ್ಟಿ, ಸಿಬಿಐ, ಇಡಿ ಮತ್ತು ಆದಾಯ ತೆರಿಗೆಯ ಭೂಕಂಪ ಸಂಭವಿಸಿದೆ. ಈ ಭೂಕಂಪಗಳು ಕೊನೆಗೊಳ್ಳುತ್ತವೆ” ಎಂದರು.

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ, ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಮಾತನಾಡಿ “ನಾವು 295+ ಪಡೆಯುತ್ತೇವೆ. ನಂತರ ಪ್ರಧಾನಿ ಮುಖದ ಕುರಿತು ನಿರ್ಧರಿಸುತ್ತೇವೆ. ಬಿಜೆಪಿ ಅವರ 400 ಪಾರ್ ಚಿತ್ರವು ಮೊದಲ ಹಂತದಲ್ಲಿಯೇ ಫ್ಲಾಪ್ ಆಗಿದೆ” ಎಂದರು.

Advertisement

ಶಿವಸೇನಾ (UBT) ನಾಯಕ ಅನಿಲ್ ದೇಸಾಯಿ ಮಾತನಾಡಿ ‘ನಾವು ಮಹಾರಾಷ್ಟ್ರದಿಂದ 30-35 ಸ್ಥಾನಗಳನ್ನು ಪಡೆಯುತ್ತೇವೆ’ ಎಂದರು.

ಚರ್ಚೆಯಲ್ಲಿ ಭಾಗಿಯಾಗಲು ನಿರ್ಧಾರ

ಕಾಂಗ್ರೆಸ್ ನಾಯಕ ಪವನ್ ಖೇರಾ ಟ್ವೀಟ್ ಮಾಡಿದ್ದು “ಇಂಡಿಯಾ ಮೈತ್ರಿ ಕೂಟದ ಪಕ್ಷಗಳು ಎಕ್ಸಿಟ್ ಪೋಲ್‌ ಚರ್ಚೆ ಗಳಲ್ಲಿ ಬಿಜೆಪಿ ಮತ್ತು ಅದರ ಪರಿಸರ ವ್ಯವಸ್ಥೆಯನ್ನು ಬಹಿರಂಗಪಡಿಸಲು ನಿರ್ಧರಿಸಿವೆ. ಎಕ್ಸಿಟ್ ಪೋಲ್‌ಗಳಲ್ಲಿ ಭಾಗವಹಿಸುವ ಪರ ಮತ್ತು ವಿರುದ್ಧ ಅಂಶಗಳನ್ನು ಪರಿಗಣಿಸಿದ ನಂತರ, ಎಲ್ಲಾ ಪಕ್ಷಗಳು ಇಂದು ಸಂಜೆ ಟಿವಿ ವಾಹಿನಿಗಳಲ್ಲಿ ನಡೆಯುವ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸಲು ಒಮ್ಮತದಿಂದ ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಚರ್ಚೆಯಲ್ಲಿ ಭಾಗಿಯಾಗುವುದಿಲ್ಲ ಎಂದಿದ್ದ ಕಾಂಗ್ರೆಸ್ ವಿರುದ್ದ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಫಲಿತಾಂಶ ಪ್ರಕಟಕ್ಕೂ ಮುನ್ನ ಸೋಲು ಒಪ್ಪಿಕೊಂಡಿದೆ ಎಂದು ಟೀಕಾ ಪ್ರಹಾರ ನಡೆಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next