ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿ ಜನರು ವಾಯು ಮಾಲಿನ್ಯದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಬೇಕಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಒಂದು ಸಾವಿರ ರೂ. ದರದಲ್ಲಿ ಉತ್ತಮ ಇಯರ್ ಬಡ್: ಯಾವುದಿದು?
ದೆಹಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟ ಮೀರಿದ್ದು, ಆರೋಗ್ಯ ಸಮಸ್ಯೆ ಎದುರಿಸಬೇಕಾದ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ(ನವೆಂಬರ್ 05)ದಿಂದ ಪ್ರಾಥಮಿಕ ಶಾಲೆಗಳನ್ನು ಬಂದ್ ಮಾಡಲಾಗಿದೆ. ಶೇ.50ರಷ್ಟು ಉದ್ಯೋಗಿಗಳು ವರ್ಕ್ ಫ್ರಂ ಹೋಮ್ ನಲ್ಲಿದ್ದಾರೆ.
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹಿಮಾಚಲ, ಗುಜರಾತ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ದೆಹಲಿ ಜನರು ಮಾಸ್ಕ್ ಧರಿಸಿ ತಮ್ಮನ್ನು ರಕ್ಷಿಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ದೆಹಲಿ ತೆರಿಗೆ ಪಾವತಿದಾರರ ಕೋಟ್ಯಂತರ ರೂಪಾಯಿ ಹಣವನ್ನು ಜಾಹೀರಾತಿಗೆ ಬಳಸುತ್ತಿದ್ದಾರೆ ಎಂದು ಮಾಂಡವಿಯಾ ಆರೋಪಿಸಿದ್ದಾರೆ.
ಇತ್ತೀಚೆಗಿನ ದಿನಗಳಲ್ಲಿ ದೆಹಲಿ-ಎನ್ ಸಿಆರ್ ಪ್ರದೇಶಗಳಲ್ಲಿ ವಾಯು ಮಾಲಿನ್ಯ ದೊಡ್ಡ ಸಮಸ್ಯೆಯಾಗತೊಡಗಿದೆ. ದೆಹಲಿಯಾದ್ಯಂತ ಭಾರೀ ಪ್ರಮಾಣದ ಹೊಗೆ ಆವರಿಸಿಕೊಂಡಿದೆ. ವಾಯು ಗುಣಮಟ್ಟ ಸೂಚ್ಯಂಕ 447 ಅಂಕ ದಾಟಿದೆ. ಇದು ಅತ್ಯಂತ ಅಪಾಯಕಾರಿಯಾಗಿದೆ ಎಂದು ವರದಿ ತಿಳಿಸಿದೆ.