Advertisement

ದೆಹಲಿ ವಿಧಾನಸಭೆ ಚುನಾವಣೆ: ಮತದಾನ ಆರಂಭ, ರಾಜಧಾನಿಯಾದ್ಯಂತ ಬಿಗಿ ಭದ್ರತೆ

10:01 AM Feb 09, 2020 | Mithun PG |

ದೆಹಲಿ: 70 ಸದಸ್ಯಬಲದ ದಿಲ್ಲಿ ವಿಧಾನಸಭೆಗೆ ಇಂದು  ಮತದಾನ ಆರಂಭವಾಗಿದ್ದು, ರಾಷ್ಟ್ರ ರಾಜಧಾನಿಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಶಹೀನ್‌ಬಾಘ್ ಹಾಗೂ ಇತರೆ ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ. 1.47 ಕೋಟಿ ಮತದಾರರು 672 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ. 81, 05,236 ಪುರುಷ ಮತದಾರರು ಮತ್ತು 66,80,277 ಮಹಿಳಾ ಮತದಾರರಿದ್ದಾರೆ.

Advertisement

ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಮತ್ತೊಮ್ಮೆ ಗೆದ್ದು 5 ವರ್ಷ ಅಧಿಕಾರದ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಫೆಬ್ರವರಿ 11ರ ಮಂಗಳವಾರದಂದು  ಫ‌ಲಿತಾಂಶ ಪ್ರಕಟವಾಗಲಿದೆ

2015 ರ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷ 67 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಬಿಜೆಪಿ ಮೂರು ಕ್ಷೇತ್ರ ಜಯಿಸಿದ್ದರೆ, ಕಾಂಗ್ರೆಸ್ ಯಾವುದೇ ಖಾತೆ ತೆರೆದಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next