Advertisement

ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ: 6 ಮಂದಿ ದುರ್ಮರಣ, 20 ಜನರಿಗೆ ಗಾಯ

01:29 PM Jul 19, 2020 | Mithun PG |

ಆಗ್ರಾ: ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ 6 ಮದಿ ಮೃತಪಟ್ಟು 20 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಕನೋಜ್ ನಲ್ಲಿ ನಡೆದಿದೆ.

Advertisement

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಗ್ರಾ-ಲಖನೌ ಎಕ್ಸ್ ಪ್ರೆಸ್ ಬಸ್ ಇಂದು ಬೆಳಿಗ್ಗೆ 5 ಗಂಟೆ ವೇಳೆಗೆ  ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದು ಬಿಹಾರದ ದರ್ಭಾಂಗ ದಿಂದ ದೆಹಲಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದ್ದು ಸೌರಿಖ್ ಎಂಬಲ್ಲಿ ಕಾರಿಗೆ ಗುದ್ದಿದೆ.

ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಎರಡೂ ಕೂಡ ಮಗುಚಿ ಬಿದ್ದಿದ್ದು ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೌರಿಖ್ ಪೊಲೀಸ್ ಠಾಣಾ ನಿಯಂತ್ರಣ ಪ್ರದೇಶದ ಬಳಿ ಬರುತ್ತಿದ್ದಂತೆಯೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಕೂಡಲೇ ಧಾವಿಸಿ ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next