ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸತ್ಯ ನಿಕೇತನ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಸೋಮವಾರ (ಏಪ್ರಿಲ್ 25), ಸಂಭವಿಸಿದ್ದು, ಹಲವಾರು ಮಂದಿ ಅವಶೇಷಗಳಡಿ ಸಿಲುಕಿಕೊಂಡಿರುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಶಾಲಾಯಲ್ಲೇ ಶಿಕ್ಷಕಿ ಜೊತೆ ಮುಖ್ಯ ಶಿಕ್ಷಕನ ರೋಮ್ಯಾನ್ಸ್ :ಗ್ರಾಮಸ್ಥರಿಂದಲೇ ಬಯಲಾಯ್ತು ಪ್ರಕರಣ
ದೆಹಲಿ ಅಗ್ನಿ ಶಾಮಕದಳದ ಅಧಿಕಾರಿಗಳ ಪ್ರಕಾರ, ಅಂದಾಜು ಐದಾರು ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿರುವುದಾಗಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ದಳ ತೆರಳಿದ್ದು, ಅವಶೇಷಗಳಡಿ ಸಿಲುಕಿಕೊಂಡವರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ಈವರೆಗೆ ವರದಿಯಾಗಿಲ್ಲ.
ನಿರ್ಮಾಣ ಹಂತದಲ್ಲಿದ್ದ ಕಟ್ಟಡ ದಿಢೀರ್ ಕುಸಿದು ಬಿದ್ದ ಪರಿಣಾಮ ಕೆಲಸಗಾರರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಇಬ್ಬರು ಸಾವು: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ಕೆಲವರನ್ನು ರಕ್ಷಿಸಲಾಗಿದ್ದು, ಇದರಲ್ಲಿ ಇಬ್ಬರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.