ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊಂಕಣಿ ಭಾಷೆ, ಸಂಸ್ಕೃತಿಯ ಅಭಿವೃದ್ಧಿ ಮತ್ತು ಪ್ರೋತ್ಸಾಹಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ವಿಶೇಷ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೊಂಕಣಿ ಅಕಾಡೆಮಿ ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಕಲೆ, ಸಂಸ್ಕೃತಿ ಮತ್ತು ಭಾಷೆಗಳ ವಿಭಾಗದ ವ್ಯಾಪ್ತಿಯಲ್ಲಿ ಅಕಾಡೆಮಿ ರಚಿಸುವ ಬಗ್ಗೆ ಸಂಪುಟದಲ್ಲಿ ಸಮ್ಮತಿ ಸೂಚಿಸಲಾಗಿದೆ. ಶೀಘ್ರದಲ್ಲಿಯೇ ಅಕಾಡೆಮಿಗೆ ಬೇಕಾಗಿರುವ ಕಚೇರಿ ಮತ್ತು ಇತರ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ದೆಹಲಿ ಸರ್ಕಾರ ಪ್ರಕಟಿಸಿದೆ.
ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಮನೀಷ್ ಸಿಸ್ಸೋಡಿಯಾ “ಭಾರತದ ಪ್ರತಿಯೊಬ್ಬನ ಹೃದಯಲ್ಲಿ ಗೋವಾದ ಬಗ್ಗೆ ವಿಶೇಷ ಸ್ಥಾನ ಇದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಕೋಳಿ, ಮೊಟ್ಟೆ ಮಾರಾಟಕ್ಕೆ ನಿರ್ಬಂಧವಿಲ್ಲ, ಎಚ್ಚರ ಅಗತ್ಯ : ಪ್ರಭು ಚೌವ್ಹಾಣ್
ಅಕಾಡೆಮಿ ಸ್ಥಾಪನೆ ಮಾಡುವುದರಿಂದ ನವದೆಹಲಿಯಲ್ಲಿ ಕೊಂಕಣಿ ಭಾಷೆಯ ಸೊಗಡು, ಸಂಸ್ಕೃತಿಗೆ ಹೆಚ್ಚಿನ ಪ್ರಚಾರ ಸಿಗಲಿದೆ ಎಂದು ಹೇಳಿದ್ದಾರೆ ಡಿಸಿಎಂ ಸಿಸ್ಸೋಡಿಯಾ. 2019ರಲ್ಲಿ ದೆಹಲಿ ಸರ್ಕಾರ ಕೈಗೊಂಡಿದ್ದ ನಿರ್ಧಾರದಲ್ಲಿ ಕಲೆ, ಸಂಸ್ಕೃತಿ ಮತ್ತು ಭಾಷೆಗಳ ವಿಭಾಗದ ವ್ಯಾಪ್ತಿಯಲ್ಲಿ ಕನ್ನಡ ಸೇರಿದಂತೆ 14 ಭಾಷೆಗಳ ಅಕಾಡೆಮಿ ರಚನೆಗೆ ಅನುಮತಿ ನೀಡಿತ್ತು.