Advertisement

IPL ಆರ್ ಸಿಬಿಗೆ ಶಾಕ್ ನೀಡಿದ ಡೆಲ್ಲಿ ; ಫಿಲಿಪ್ ಸಾಲ್ಟ್ ಅಬ್ಬರ

11:00 PM May 06, 2023 | Team Udayavani |

ಹೊಸದಿಲ್ಲಿ : ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಅನುಭವಿಸಿದೆ.

Advertisement

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ 4 ವಿಕೆಟ್ ನಷ್ಟಕ್ಕೆ 181 ರನ್ ಕಲೆ ಹಾಕಿತು. ಕೊಹ್ಲಿ 55, ಡು ಪ್ಲೆಸಿಸ್ 45, ಲೊಮೊರ್ ಔಟಾಗದೆ 54 ರನ್ ಗಳಿಸಿದರು. ಮಿಚೆಲ್ ಮಾರ್ಷ್ 2 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಡೆಲ್ಲಿ 16.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿ 7 ವಿಕೆಟ್‌ಗಳಿಂದ ಜಯಭೇರಿ ಬಾರಿಸಿತು. ಫಿಲಿಪ್ ಸಾಲ್ಟ್ ಭರ್ಜರಿ 87 ರನ್ ಗೆಲುವಿನಲ್ಲಿ ದೊಡ್ಡ ಕೊಡುಗೆಯಾಯಿತು.45 ಎಸೆತಗಳಲ್ಲಿ 8 ಆಕರ್ಷಕ ಬೌಂಡರಿ ಮತ್ತು 6 ಸಿಕ್ಸರ್ ಗಳನ್ನ ಅವರು ಸಿಡಿಸಿದರು. ಡೇವಿಡ್ ವಾರ್ನರ್ 22, ಮಿಚೆಲ್ ಮಾರ್ಷ್ 26, ರಿಲೀ ರೊಸೊವ್ ಔಟಾಗದೆ 35 ರನ್ ಗಳಿಸಿದರು.

ಪಾಯಿಂಟ್ಸ್ ಟೇಬಲ್ ನಲ್ಲಿ ಡೆಲ್ಲಿ 8 ಅಂಕ ಗಳಿಸಿ ಕೊನೆಯ ಸ್ಥಾನದಿಂದ ಮೇಲಕ್ಕೆ ಬಂದಿದೆ. ಆಡಿದ 10 ಪಂದ್ಯಗಳಲ್ಲಿ 4 ಮಾತ್ರ ಗೆದ್ದಿದೆ. ಆರ್ ಸಿಬಿ 10 ಅಂಕಗಳೊಂದಿಗೆ 5 ನೇ ಸ್ಥಾನದಲ್ಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next