ಹೊಸದಿಲ್ಲಿ: ತಮ್ಮ ಅಂತಿಮ ಲೀಗ್ ಪಂದ್ಯಗಳಿಗೆ ಸಜ್ಜಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಅರುಣ್ ಜೇಟ್ಲಿ ಮೈದಾನದಲ್ಲಿ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಸಿಎಸ್ ಕೆ ನಾಯಕ ಎಂ.ಎಸ್.ಧೋನಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ.
15 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿರುವ ಚೆನ್ನೈ ಈ ಪಂದ್ಯ ಗೆದ್ದು ತಮ್ಮ ಪ್ಲೇ ಆಫ್ ಸ್ಥಾನವನ್ನು ಭದ್ರಪಡಿಸುವ ಯೋಜನೆಯಲ್ಲಿದೆ. ಒಂದು ವೇಳೆ ಇಂದು ಸೋತರೆ ಹಿನ್ನಡೆಗೆ ಸಿಲುಕುವ ಸಾಧ್ಯತೆ ಇದೆ. ಆಗ ಲಕ್ನೋ, ಮುಂಬೈ ಮತ್ತು ಆರ್‌ಸಿಬಿ ತಂಡಗಳ ಫಲಿತಾಂಶ ನಿರ್ಣಾಯಕವಾಗಲಿದೆ.
ಡೆಲ್ಲಿಗೆ ಇದು ಲೆಕ್ಕದ ಭರ್ತಿಯ ಪಂದ್ಯ. ಆದರೆ ಕೂಟದಿಂದ ಹೊರಬಿದ್ದ ಮೊದಲ ತಂಡವೆಂಬ ಅವಮಾನಕ್ಕೆ ಸಿಲುಕಿರುವ ಡೆಲ್ಲಿಗೆ ಗೆಲುವಿನೊಂದಿಗೆ 2023ರ ಋತುವನ್ನು ಮುಗಿಸುವ ಸಹಜ ಅಭಿಲಾಷೆ. “ಫಾರ್ ಎ ಚೇಂಜ್’ ಎಂಬಂತೆ ಡೆಲ್ಲಿ ಆಟಗಾರರು ಈ ಪಂದ್ಯಕ್ಕಾಗಿ ಸಪ್ತವರ್ಣದ “ರೈನ್‌ಬೋ’ಜೆರ್ಸಿಯನ್ನು ಧರಿಸಿ ಆಡುತ್ತಿದ್ದಾರೆ.
ತಂಡಗಳು
Related Articles
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾ), ಫಿಲಿಪ್ ಸಾಲ್ಟ್ (ವಿ.ಕೀ), ರೈಲಿ ರೋಸ್ಸೋ, ಯಶ್ ಧುಲ್, ಅಮನ್ ಹಕೀಮ್ ಖಾನ್, ಅಕ್ಸರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅನ್ರಿಚ್ ನೋರ್ಜೆ.
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾ/ವಿ.ಕೀ), ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ