Advertisement

ದೆಹಲಿ ಗಲಭೆ: ಸಾವಿನ ಸಂಖ್ಯೆ 18ಕ್ಕೆ ಏರಿಕೆ: ಪೊಲೀಸರು ಸೇರಿದಂತೆ 180 ಜನರಿಗೆ ಗಂಭೀರ ಗಾಯ

11:03 AM Feb 27, 2020 | Mithun PG |

ದೆಹಲಿ: ಈಶಾನ್ಯ ದಿಲ್ಲಿಯಲ್ಲಿ ಸಿಎಎ ಪರ ಮತ್ತು ವಿರೋಧಿ ಪ್ರತಿಭಟನಾಕಾರರ ನಡುವೆ ಆರಂಭವಾಗಿರುವ ಹಿಂಸಾಚಾರವು ತಾರಕಕ್ಕೇರಿದ್ದು ಬುಧವಾರ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಜಫ್ರಾಬಾದ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಹಿಂಸಾಚಾರ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ

Advertisement

ಘಟನೆಯಲ್ಲಿ 50 ಪೊಲೀಸರು ಸೇರಿದಂತೆ 180 ಮಂದಿ ಗಾಯಗೊಂಡಿದ್ದು, ಅವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಹಿಂಸಾಚಾರ ಹತ್ತಿಕ್ಕಲು ಕಂಡಲ್ಲಿ ಗುಂಡಿಕ್ಕಲು ಆದೇಶಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಭಾರೀ ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಜಫ್ರಾಬಾದ್, ಮೌಜ್ ಪುರ, ಭಜನ್ ಪುರ ಚೌಕ್, ಚಾಂದ್ ಬಾಗ್, ಕರ್ವಾಲ್ ನಗರ್, ಖುರೇಜಿ ಖಾಸ್, ಬಾಬರ್ ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಹರಸಾಹಸ ನಡೆಸಿದ್ದು, ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್​ಪಿಎಫ್) ವಿಶೇಷ ಮಹಾ ನಿರ್ದೇಶಕರಾಗಿದ್ದ ಎಸ್.ಎನ್. ಶ್ರೀವಾಸ್ತವ ಅವರನ್ನು ನವ ದೆಹಲಿಯ ವಿಶೇಷ ಪೊಲೀಸ್ ಆಯುಕ್ತರಾಗಿ (ಕಾನೂನು ಮತ್ತು ಸುವ್ಯವಸ್ಥೆ) ನೇಮಕ ಮಾಡಲಾಗಿದೆ.

 

Advertisement

ಹಿಂಸಾಚಾರ ಮುಂದುವರೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next