Advertisement

ED ಬಂಧನದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್

02:26 PM Mar 22, 2024 | Team Udayavani |

ಹೊಸದಿಲ್ಲಿ: ಜಾರಿ ನಿರ್ದೇಶನಾಲಯದ ಬಂಧಿಸುವುದರ ವಿರುದ್ಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಗುರುವಾರ ಸಂಜೆ ಸಲ್ಲಿಸಿದ್ದ ಅರ್ಜಿಯನ್ನು  ಹಿಂಪಡೆದಿದ್ದಾರೆ.

Advertisement

ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಕೇಜ್ರಿವಾಲ್ ಅವರು ರಿಮಾಂಡ್‌ ನಲ್ಲಿರುವುದರಿಂದ ದ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಇ.ಡಿ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಕೇಜ್ರಿವಾಲ್ ಅವರನ್ನು ಬಂಧನಕ್ಕೊಳಪಡಿಸಿತ್ತು. ಇದಕ್ಕೂ ಮುನ್ನ ಹೈಕೋರ್ಟ್ ಕೂಡ ರಕ್ಷಣೆ ನೀಡಲು ನಿರಾಕರಿಸಿತ್ತು. ತುರ್ತು ವಿಚಾರಣೆ ಕೋರಿ ಕೇಜ್ರಿವಾಲ್ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next