ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಒಂದು ವೇಳೆ ಅಧಿಕಾರಕ್ಕೆ ಬಂದರೆ ದಿಲ್ಲಿಯಲ್ಲಿ ಎನ್ ಆರ್ ಸಿ, ಎನ್ ಪಿಆರ್ ಅನ್ನು ಈಗಿರುವ ಮಾದರಿಯಲ್ಲಿ ಜಾರಿಗೆ ತರುವುದಿಲ್ಲ ಎಂದಿದೆ.
ಅಷ್ಟೇ ಅಲ್ಲದೆ ನಿರುದ್ಯೋಗಿಗಳಿಗೆ ಭತ್ಯೆ ನೀಡುವ ವಿಚಾರವನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದೆ. ಪದವೀಧರ ನಿರುದ್ಯೋಗಿಗಳಿಗೆ 5000 ರೂ. ಮತ್ತು ಸ್ನಾತಕೋತ್ತರ ಪದವೀಧರ ನಿರುದ್ಯೋಗಿಗಳಿಗೆ ತಿಂಗಳಿಗೆ 7500 ರೂ. ನೀಡುವುದಾಗಿ ಹೇಳಿದೆ.
ದಿಲ್ಲಿ ಕಾಂಗ್ರೆಸ್ ಮುಖ್ಯಸ್ಥ ಸುಭಾಷ್ ಚೋಪ್ರಾ ಇಂದು ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಒಂದು ವೇಳೆ ಅಧಿಕಾರಕ್ಕೆ ಬಂದರೆ ಎನ್ ಆರ್ ಇ ಮತ್ತು ಎನ್ ಪಿಆರ್ ಅನ್ನು ಈಗಿರುವ ರೂಪದಲ್ಲಿ ದಿಲ್ಲಿಯಲ್ಲಿ ಅನುಷ್ಠಾನಕ್ಕೆ ಅವಕಾಶ ಕೊಡುವುದಿಲ್ಲ. ಇದರ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗುವುದು ಎಂದಿದ್ದಾರೆ.
ಉಳಿದಂತೆ ಪ್ರತಿ ತಿಂಗಳು 300 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.