Advertisement

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಎ.5 ಕ್ಕೆ ಮುಂದೂಡಿಕೆ

05:16 PM Mar 25, 2023 | Team Udayavani |

ನವದೆಹಲಿ: ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಅಕ್ರಮಗಳ ಹಿನ್ನೆಲೆಯಲ್ಲಿ ಬಂಧನದಲ್ಲಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಕೋರ್ಟ್ ಏಪ್ರಿಲ್ 5 ಕ್ಕೆ ಮುಂದೂಡಿದೆ.

Advertisement

ಸಿಸೋಡಿಯಾ ಪರ ವಕೀಲರು ತಮ್ಮ ಕಕ್ಷಿದಾರರ ಜಾಮೀನು ಅರ್ಜಿಗೆ ಸಲ್ಲಿಸಿದ ಇ.ಡಿ ಉತ್ತರಕ್ಕೆ ಪ್ರತಿಕ್ರಿಯಿಸಲು ಸಮಯ ಕೋರಿದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ವಿಚಾರಣೆಯನ್ನು ಮುಂದೂಡಿದರು.

ಈ ವಿಚಾರದಲ್ಲಿ ವಿವರವಾದ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಸಿಸೋಡಿಯಾ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಇದರಂತೆ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಏಪ್ರಿಲ್ 5 ರವರೆಗೆ ಮುಂದುವರೆಯಲಿದೆ.

ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

Advertisement

ಇದನ್ನೂ ಓದಿ: ಹೆಸರು ಹೇಳಿದ್ರೆ ಜನ ಭಯಪಡುತ್ತಿದ್ದ ಈ ರೈಲ್ವೆ ನಿಲ್ದಾಣ 42 ವರ್ಷಗಳ ಕಾಲ ಮುಚ್ಚಲು ಕಾರಣವೇನು?

Advertisement

Udayavani is now on Telegram. Click here to join our channel and stay updated with the latest news.

Next