ನವದೆಹಲಿ: 2020ರಲ್ಲಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಜೆಎನ್ಯು ವಿದ್ಯಾರ್ಥಿ ಉಮರ್ ಖಾಲಿದ್ಗೆ ದೆಹಲಿ ನ್ಯಾಯಾಲಯ ಬುಧವಾರ (ಡಿ.18) ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಸೋದರಸಂಬಂಧಿಯ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಖಾಲಿದ್ ಅವರಿಗೆ ಏಳು ದಿನಗಳ (ಡಿಸೆಂಬರ್ 28 ರಿಂದ ಜನವರಿ 3 ರವರೆಗೆ) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಘಟನೆಯಲ್ಲಿ 53 ಜನರು ಸಾವನ್ನಪ್ಪಿದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡರು. ಈ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಖಾಲಿದ್ ನನ್ನು ಬಂಧಿಸಲಾಗಿತ್ತು ಅಲ್ಲದೆ ಖಾಲಿದ್ ಮೇಲೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಯಿಸಲಾಗಿತ್ತು, ಉಮರ್ ಖಾಲಿದ್ ಕಳೆದ ನಾಲ್ಕು ವರ್ಷಗಳಿಂದ ಜಾಮೀನಿಗೆ ಹಲವು ಬಾರಿ ಅರ್ಜಿ ಸಲ್ಲಿಸಿದ್ದು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಕುಟುಂಬದ ಮದುವೆಗೆ ಹಾಜರಾಗಲು ಖಾಲಿದ್ 10 ದಿನಗಳ ಮಧ್ಯಂತರ ಜಾಮೀನು ಕೋರಿದ್ದರು, ಆದರೆ ನ್ಯಾಯಾಲಯವು ಷರತ್ತುಗಳೊಂದಿಗೆ ಏಳು ದಿನಗಳ ಜಾಮೀನು ನೀಡಿದೆ.
ಇದನ್ನೂ ಓದಿ: ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ