ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಆಪ್ ನಾಯಕ, ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮನೀಶ್ ಸಿಸೋಡಿಯಾ ಇದನ್ನು ಪ್ರಶ್ನಿಸಿ ಮೇಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಸದ್ಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ನ್ಯಾಯಾಂಗ ಕಸ್ಟಡಿಯಲ್ಲಿದ್ದು ಎಪ್ರಿಲ್ 3ರ ಮೊದಲು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಬೇಕಾಗಿದೆ.
ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಿದರೆ ಅದು ನಮ್ಮ ತನಿಖೆಯನ್ನು ದುರ್ಬಲಗೊಳಿಸುತ್ತದೆ. ಏಕೆಂದರೆ ಅವರ ಪ್ರಭಾವ ಮತ್ತು ಹಸ್ತಕ್ಷೇಪ ಪ್ರಕರಣದ ಮೇಲೆ ಬೀಳುವ ಸಾಧ್ಯತೆಯಿದೆ ಎಂದು ಎಂದು ಅರ್ಜಿಯನ್ನು ವಿರೋಧಿಸಿರುವ ಸಿಬಿಐ ಹೇಳಿಕೆ ನೀಡಿದೆ.
ಕಳೆದ ಫೆ.26ರಂದು ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿತ್ತು.
ಇದನ್ನೂ ಓದಿ:
ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್