ದೆಹಲಿ: ರಾಷ್ಷ್ರ ರಾಜಧಾನಿ ದೆಹಲಿಯಲ್ಲಿ ದಿನೇ ದಿನೇ ಕೋವಿಡ್ ಸೋಕು ಹೆ್ಚ್ಚುತ್ತಿರುವ ಬೆನ್ನಲ್ಲೇ ದೆಹಲಿ ಸರ್ಕಾರದ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಅವರಿಗೂ ಕೋವಿಡ್ ಸೋಂಕು ದೃಢವಾಗಿದೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಗೋಪಾಲ್ ರಾಯ್ ಅವರು, ಇತ್ತೀಚಿಗೆ ತಮ್ಮ ಜೊತೆ ಸಂಪರ್ಕ ಹೊಂದಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.
ಕೋವಿಡ್ ಗೆ ಸಂಭಂದಿಸಿದ ಪ್ರಾಥಮಿಕ ಲಕ್ಷಣಗಳು ಕಂಡುಬಂದ ನಂತರ, ನಾನು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೇನೆ. ಇದೀಗ ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಕೆಲದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿರುವವರು ತಕ್ಷಣವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ನಿಮ್ಮ ಆರೋಗ್ಯದ ಕುರಿತು ಗಮನಹರಿಸಿ ಎಂದು ಹಿಂದಿ ಭಾಷೆಯಲ್ಲಿ ಟ್ವಿಟ್ ಮಾಡಿದ್ದಾರೆ.
ಇದನ್ನೂ ಓದಿ:ಯಡಿಯೂರಪ್ಪ ಅವರ ಸ್ಥಿತಿ ಮುಳ್ಳಿನ ಮೇಲಿನ ಬಟ್ಟೆಯಂತೆ ಆಗಿದೆ : ಶ್ರೀನಿವಾಸ್ ಪ್ರಸಾದ್
ಪ್ರಸ್ತುತ ದೆಹಲಿ ಸರ್ಕಾರದಲ್ಲಿ ಕೋವಿಡ್ ಸೋಂಕಿಗೆ ತುತ್ತಾದ ಮೂರನೇ ಸಚಿವರು ಇವರಾಗಿದ್ದಾರೆ. ಈ ಹಿಂದೆ ಉಪ ಮುಖ್ಯಮತ್ರಿ ಮನೀಶ್ ಸಿಸೋಡಿಯಾ ಮತ್ತು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.
ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ವಾಯುಮಾಲಿನ್ಯದ ಜೊತೆಗೆ ಕೋವಿಡ್ ಸೊಂಕಿನ ಪ್ರಮಾಣವು ಅಧಿಕವಾಗುತ್ತಿದ್ದು,ಕಳೆದ 24 ಗಂಟೆಗಳಲ್ಲಿ 5,246 ಹೊಸ ಪ್ರಕರಣಗಳು ದಾಖಲಾಗಿದ್ದು, 99 ಜನ ಸಾವನಪ್ಪಿದ್ದಾರೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 5.45 ಲಕ್ಷ ತಲುಪಿದೆ.