ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಶುಕ್ರವಾರ ಸಿಬಿಐಗೆ ನೊಟೀಸ್ ಜಾರಿ ಮಾಡಿದೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ನಲ್ಲಿ ಶುಕ್ರವಾರ ವಿಚಾರಣೆ ನಡೆಸಲಾಯಿತು. ಅರ್ಜಿಯಲ್ಲಿ ಕೇಜ್ರಿವಾಲ್ ಬಂಧನವನ್ನೂ ಸಿಬಿಐ ಪ್ರಶ್ನಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿ, ಮುಂದಿನ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿದೆ.
ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅರವಿಂದ್ ಕೇಜ್ರಿವಾಲ್ ಭಯೋತ್ಪಾದಕರಲ್ಲ, ಸಿಬಿಐ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರಾದ ಬಳಿಕ ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸಿದೆ ಎಂದು ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಮೊದಲು ವಿಚಾರಣಾ ನ್ಯಾಯಾಲಯಕ್ಕೆ ತೆರಳುವ ಬದಲು ನೇರವಾಗಿ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿರುವ ಕುರಿತು ಸಿಬಿಐ ಪರ ವಾದ ಮಂಡಿಸಿದ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Shimoga; ಬಂದ್ ಆಗದ ತಳಭಾಗದ ಗೇಟ್: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು