Advertisement

Delhi Excise Policy case; ಸಿಸೋಡಿಯಾಗೆ ಜಾಮೀನು ತಿರಸ್ಕರಿಸಿದ ಸರ್ವೋಚ್ಛ ನ್ಯಾಯಾಲಯ

11:41 AM Oct 30, 2023 | Team Udayavani |

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಒಂದು ವೇಳೆ ಪ್ರಕರಣದ ತನಿಖೆಯು ಮಂದಗತಿಯಲ್ಲಿ ಸಾಗಿದರೆ ಮತ್ತೆ ಸಿಸೋಡಿಯಾ ಅವರು ಜಾಮೀನಿಗೆ ಅರ್ಜಿ ಹಾಕಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Advertisement

ಪ್ರಕರಣದಲ್ಲಿ ಹಣದ ಆರೋಪಗಳು ತಾತ್ಕಾಲಿಕವಾಗಿ ಸ್ಥಾಪಿತವಾಗಿವೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.

ಅಲ್ಲದೆ ಆರರಿಂದ ಎಂಟು ತಿಂಗಳೊಳಗಾಗಿ ತನಿಖೆ ಮುಗಿಸಬೇಕು ಎಂದು ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಒಂದು ವೇಳೆ ತನಿಖಾ ಹಂತದಲ್ಲಿ ವಿಳಂಬವಾದರೆ ನಂತರ ಸಿಸೋಡಿಯಾ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಪೀಠ ಹೇಳಿದೆ. 338 ಕೋಟಿ ರೂಪಾಯಿಗಳ ಹಣ ವರ್ಗಾವಣೆಗೆ ಸಂಬಂಧಿಸಿದ ಅಂಶಗಳನ್ನು ತಾತ್ಕಾಲಿಕವಾಗಿ ಸ್ಥಾಪಿಸಲಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ.

ಈ ಪ್ರಕರಣವು ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠ ಈ ಆದೇಶ ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಪ್ರಕರಣಗಳಲ್ಲಿ ಜಾಮೀನು ಕೋರಿ ಮನೀಶ್ ಸಿಸೋಡಿಯಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಎಎಪಿ ನಾಯಕ ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next