Advertisement

Delhi Excise Scam Case: ಬಿಆರ್‌ಎಸ್ ನಾಯಕಿ ಕೆ ಕವಿತಾ ಜಾಮೀನು ಅರ್ಜಿ ವಜಾ

12:00 PM Apr 08, 2024 | Team Udayavani |

ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರಿಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಕವಿತಾ ಸಲ್ಲಿಸಿದ್ದ ಮನವಿಯನ್ನು ರೋಸ್ ಅವೆನ್ಯೂ ಕೋರ್ಟ್ ತಿರಸ್ಕರಿಸಿದೆ.

Advertisement

ಕಿರಿಯ ಮಗನ ಪರೀಕ್ಷೆ ನಡೆಯುತ್ತಿರುವ ಕಾರಣ ಇದೇ ತಿಂಗಳ 16ರವರೆಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಕೆ. ಕವಿತಾ ಅರ್ಜಿ ಸಲ್ಲಿಸಿದ್ದರು. ಆದರೆ, ಕವಿತಾಗೆ ಜಾಮೀನು ನೀಡದಂತೆ ಇಡಿ ನ್ಯಾಯಾಲಯವನ್ನು ಕೋರಿತ್ತು. ಪ್ರಕರಣದ ನಿರ್ಣಾಯಕ ಹಂತದಲ್ಲಿ ಆಕೆಗೆ ಜಾಮೀನು ನೀಡಿದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ವಾದಿಸಿದೆ. ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಈಗಾಗಲೇ ರೋಸ್ ಅವೆನ್ಯೂ ಕೋರ್ಟ್ ಎರಡೂ ಕಡೆಯ ವಾದವನ್ನು ಆಲಿಸಿ ಕವಿತಾ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ.

ಬಿಆರ್‌ಎಸ್ ಬೆಂಬಲಿಗರ ಪ್ರತಿಭಟನೆಯ ನಡುವೆ 46 ವರ್ಷದ ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಅವರ ಬಂಜಾರಾ ಹಿಲ್ಸ್ ನಿವಾಸದಿಂದ ಬಂಧಿಸಲಾಯಿತು. ಪ್ರಸ್ತುತ ಅವರು 14 ದಿನಗಳ ನ್ಯಾಯಾಂಗ ಬಂಧನದ ಭಾಗವಾಗಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಕವಿತಾ ಅವರ 14 ದಿನಗಳ ನ್ಯಾಯಾಂಗ ಬಂಧನ ನಾಳೆ ಕೊನೆಗೊಳ್ಳಲಿದೆ. ಮತ್ತೊಂದೆಡೆ, ಈ ಪ್ರಕರಣದಲ್ಲಿ ಕವಿತಾ ಅವರ ಸಾಮಾನ್ಯ ಜಾಮೀನು ಅರ್ಜಿಯ ವಿಚಾರಣೆ ಇದೇ 20 ರಂದು ನಡೆಯಲಿದೆ.

ಇದನ್ನೂ ಓದಿ: Nangli Check Post; ಕರ್ನಾಟಕ-ಆಂಧ್ರ ಗಡಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ; ಓರ್ವನ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next