Advertisement

ದೀಪಾವಳಿ ಹಬ್ಬ: ದೆಹಲಿಯಲ್ಲಿ ಪಟಾಕಿ ಸಿಡಿಸಿದರೆ ಜೈಲು, ದಂಡ

03:33 PM Oct 19, 2022 | Team Udayavani |

ನವದೆಹಲಿ : ದೀಪಾವಳಿ ಹಬ್ಬಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧ ಮಾಡಿ ದೆಹಲಿ ಸರಕಾರ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ.

Advertisement

ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರಾಯ್ ಬುಧವಾರ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜಧಾನಿಯಲ್ಲಿ ಪಟಾಕಿ ಉತ್ಪಾದನೆ, ಶೇಖರಣೆ ಮತ್ತು ಮಾರಾಟಕ್ಕೆ 5,000 ರೂ.ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ, ನಗರಾಡಳಿತವು ದೀಪಾವಳಿ ಸೇರಿದಂತೆ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ಜನವರಿ 1 ರವರೆಗೆ ಸಂಪೂರ್ಣ ನಿಷೇಧಿಸಿತ್ತು, ಇದು ಕಳೆದ ಎರಡು ವರ್ಷಗಳಿಂದ ಅನುಸರಿಸುತ್ತಿರುವ ಪದ್ಧತಿಯಾಗಿದೆ.

“ದಿಯೇ ಜಲಾವೋ ಪತಾಖೆ ನಹಿ” (ದೀಪ ಬೆಳಗಿರಿ ಪಟಾಕಿ ಅಲ್ಲ) ಎಂಬ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಅಕ್ಟೋಬರ್ 21 ರಂದು ಪ್ರಾರಂಭಿಸಲಾಗುವುದು ಎಂದು ರಾಯ್ ಹೇಳಿದರು. ದೆಹಲಿ ಸರ್ಕಾರವು ಶುಕ್ರವಾರ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ 51,000 ದೀಪಗಳನ್ನು ಬೆಳಗಿಸಲಿದೆ.

Advertisement

“ದೆಹಲಿಯಲ್ಲಿ ಪಟಾಕಿಗಳನ್ನು ಖರೀದಿಸುವುದು ಮತ್ತು ಸಿಡಿಸುವುದು 200 ರೂಪಾಯಿ ದಂಡ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಆರು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗುತ್ತದೆ” ಎಂದು ಸಚಿವರು ಹೇಳಿದರು.

ನಿಷೇಧಾಜ್ಞೆ ಜಾರಿಗೊಳಿಸಲು 408 ತಂಡಗಳನ್ನು ರಚಿಸಲಾಗಿದೆ ಎಂದು ರೈ ಹೇಳಿದರು. ದೆಹಲಿ ಪೊಲೀಸರು ಸಹಾಯಕ ಪೊಲೀಸ್ ಆಯುಕ್ತರ ಅಡಿಯಲ್ಲಿ 210 ತಂಡಗಳನ್ನು ರಚಿಸಿದ್ದರೆ, ಕಂದಾಯ ಇಲಾಖೆ 165 ತಂಡಗಳನ್ನು ಸ್ಥಾಪಿಸಿದೆ ಮತ್ತು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯು 33 ತಂಡಗಳನ್ನು ರಚಿಸಿದೆ. ಅಕ್ಟೋಬರ್ 16 ರವರೆಗೆ 188 ಉಲ್ಲಂಘನೆ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ ಮತ್ತು 2,917 ಕೆಜಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಚಿವ ರಾಯ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next