ನವದೆಹಲಿ : ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದ ದೆಹಲಿಯಲ್ಲಿ ಸೋಂಕಿನ ಸಂಖ್ಯೆಗಳು ಹೆಚ್ಚಾಗುತ್ತಿದ್ದು ಮೂರನೆಯ ಹಂತವನ್ನು ದಾಟಿದೆ ಎಂದು ಆರೋಗ್ಯ ಸಚಿವ ಸತ್ಯೇoದ್ರ ಜೈನ್ ಕಳವಳ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ವಾಯು ಮಾಲಿನ್ಯ ಉಂಟಾಗಿದ್ದ ಪರಿಣಾಮ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು ಅಲ್ಲದೆ ದೀಪಾವಳಿ ಹಬ್ಬದ ಆಚರಣೆಗಾಗಿ ಜನರು ಮಾರುಕಟ್ಟೆಗೆ ಆಹಾರ ಖರೀದಿಗೆ ಬರುವವರ ಸಂಖ್ಯೆಯಲ್ಲಿಯೂ ಹೆಚ್ಚಾದ ಪರಿಣಾಮ ಕೋವಿಡ್ ಪ್ರಕರಣಗಳು ಹೆಚ್ಚಾಗಿವೆ ಎಂದು ಹೇಳಲಾಗಿದೆ.
ಈ ಕುರಿತು ಮಾತನಾಡಿದ ಅರೋಗ್ಯ ಸಚಿವರು ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದ್ದು ಈಗಾಗಲೇ ಮೂರನೇ ಹಂತವನ್ನು ದಾಟಿದೆ ಎಂದು ಹೇಳಿದ್ದಾರೆ. ಅಲ್ಲದೆ ಕೋವಿಡ್ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಮುಂದಿನದಿನಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಮಜೂರು: ಕಲಬೆರಕೆ ಜೇನುತುಪ್ಪ ಮಾರಾಟ ಜಾಲವನ್ನು ಭೇದಿಸಿದ ಸ್ಥಳೀಯರು!ಯುವಕರು ಪೊಲೀಸರ ವಶಕ್ಕೆ
ಜನರು ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡುವ ಅಗತ್ಯ ಇಲ್ಲ ಯಾಕೆಂದರೆ ದೀಪಾವಳಿ ಹಬ್ಬ ಮುಗಿದ ಹಿನ್ನೆಲೆಯಲ್ಲಿ ಜನ ಕೊಂಚ ಎಚ್ಚರಗೊಳ್ಳಬೇಕು, ಮಾಸ್ಕ್ ಕಡ್ಡಯಾಗಿ ಧರಿಸುವುದರಿಂದ ಕೋವಿಡ್ ಪ್ರಕರಣ ನಿಯಂತ್ರಣ ಸಾಧ್ಯ ಎಂದಿದ್ದಾರೆ.
ರವಿವಾರ ಒಂದೇ ದಿನ ದೆಹಲಿಯಲ್ಲಿ 3,235 ಹೊಸ ಪ್ರಕರಣಗಳು ದಾಖಲಾಗಿತ್ತು ಅಲ್ಲದೆ 95 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.