Advertisement

ಸಹಪಾಠಿಗಳ ಅತ್ಯಾಚಾರ ಬಗ್ಗೆ ವಿದ್ಯಾರ್ಥಿಗಳ ಚರ್ಚೆ!

09:41 AM Dec 19, 2019 | Team Udayavani |

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ತಮ್ಮ ವಾಟ್ಸ್‌ ಆ್ಯಪ್‌ ಗ್ರೂಪ್‌ನಲ್ಲಿ ತಮ್ಮದೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಸಾಮೂಹಿಕವಾಗಿ ಅತ್ಯಾಚಾರ ನಡೆಸುವ ಬಗ್ಗೆ ಚರ್ಚೆ ಮಾಡಿರುವುದು ಇಡೀ ದೇಶದ ಗಮನ ಸೆಳೆದಿದೆ.

Advertisement

ಈ ಗ್ರೂಪ್‌ನಲ್ಲಿನ ಇಬ್ಬರು ವಿದ್ಯಾರ್ಥಿಗಳು ತಮ್ಮ ಸಂಗಡಿಗರೊಡನೆ ಈ ರೀತಿಯ ಅಶ್ಲೀಲ ವಿಚಾರಗಳ ಬಗ್ಗೆ ಚಾಟ್‌ ಮಾಡುತ್ತಿರುವಾಗ ಅವರ ಹೆತ್ತವರಿಗೆ ಸಿಕ್ಕಿಬಿದ್ದಿದ್ದಾರೆ. ಹೆತ್ತವರು ತಕ್ಷಣವೇ ಶಾಲೆಯ ಆಡಳಿತ ಮಂಡಳಿಗೆ ಈ ವಿಚಾರವನ್ನು ಗಮನಕ್ಕೆ ತಂದಿದ್ದು, ವಾಟ್ಸ್‌ಆ್ಯಪ್‌ ಗುಂಪಿನ ಎಂಟು ವಿದ್ಯಾರ್ಥಿಗಳನ್ನು ಸದ್ಯದ ಮಟ್ಟಿಗೆ ಶಾಲೆಯ ಆಡಳಿತ ಮಂಡಳಿ ಅಮಾನತುಗೊಳಿಸಿದೆ.

ಮಾಧ್ಯಮಗಳಲ್ಲಿ ಈ ಬಗ್ಗೆ ಬಂದಿರುವ ವರದಿಗಳ ಬಗ್ಗೆ ಹಲವಾರು ಜನರು ಟ್ವಿಟರ್‌ನಲ್ಲಿ ‘ನಮ್ಮ ಸಮಾಜಕ್ಕೆ ಏನಾಗಿದೆ?’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next